ಎಲ್ಲಾ ಸಂದರ್ಭಕ್ಕೂ ನಗುವೇ ಒಳ್ಳೆಯ ಉತ್ತರ – ದರ್ಶನ್ ಭೇಟಿ ಬಳಿಕ ಪವಿತ್ರಾ ಪೋಸ್ಟ್!

Public TV
1 Min Read
pavithra gowda

ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ಮೇ 20ರಂದು ಕೋರ್ಟ್ನಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ (Pavithra Gowda) ಮುಖಾಮುಖಿಯಾಗಿದ್ದರು. ಈ ಭೇಟಿಯ ಬಳಿಕ ನಟಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಸಮಯ, ತಾಳ್ಮೆ, ಮೌನದ ಮಹತ್ವ ತಿಳಿಸುವ ಬಗ್ಗೆ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ನಮ್ಮ ಜಗಳ ನಮ್ಮಲ್ಲೇ ಇರಬೇಕಿತ್ತು, ನಾನು ಸತ್ತರೂ ಯಾರೂ ಕಾರಣರಲ್ಲ: ಸಹ ಕಲಾವಿದೆ

pavithra gowdaಪವಿತ್ರಾ ಇನ್ಸ್ಟಾ ಸ್ಟೋರಿಯಲ್ಲಿ, ಕಾಲ ಹಾಗೂ ತಾಳ್ಮೆಯೇ ಕೀಲಿ ಕೈ. ಮೌನ ಎಲ್ಲಾ ಪ್ರಶ್ನೆಗಳಿಗೂ ಒಳ್ಳೆಯ ಉತ್ತರ. ನಗು ಎಲ್ಲಾ ಸಂದರ್ಭಗಳಲ್ಲಿಯೂ ಉತ್ತಮ ಪ್ರತಿಕ್ರಿಯೆ ಎಂದು ನಟಿ ಬರೆದುಕೊಂಡಿದ್ದಾರೆ. ಹಣೆಗೆ ಬಿಂದಿ ಇಟ್ಟು ಪವಿತ್ರಾ ಬಿಳಿ ಸೀರೆ ಉಟ್ಟು ಪೋಸ್ ಕೊಟ್ಟಿರುವ ಪೋಸ್ಟ್ ಶೇರ್ ಮಾಡಿದ್ದಾರೆ. ಇದನ್ನೂ ಓದಿ:ಅಪ್ಪಂಗೂ, ತಾತನಿಗೂ ಇಬ್ರೂ ಹೆಂಡ್ತಿರು, ನಿನ್ನ ಮದ್ವೆ ಆಗ್ತೀನಿ ಅಂತ ಕಥೆ ಕಟ್ಟಿದ್ದ- ಮನು ಕರ್ಮಕಾಂಡ ಬಿಚ್ಚಿಟ್ಟ ಸಂತ್ರಸ್ತೆ

pavithra gowda 1

ಅದಷ್ಟೇ ಅಲ್ಲ, ಮತ್ತೊಂದು ಸ್ಟೋರಿಯಲ್ಲಿ ಶ್ರೀಕೃಷ್ಣನ ಫೋಟೋ ಶೇರ್ ಮಾಡಿ, ಎಲ್ಲವನ್ನು ಕಳೆದುಕೊಂಡ ಹಾಗೆ ಸ್ವಲ್ಪ ದಿನ ನಟಿಸಿ ನೋಡು ನಿನ್ನವರು ಯಾರು ಎಂದು ತಿಳಿಯುತ್ತದೆ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.

darshan pavithra gowdaದರ್ಶನ್ (Darshan) ಜೊತೆಗಿನ ಮುಖಾಮುಖಿಯ ಬಳಿಕ ಪವಿತ್ರಾ (Pavithra Gowda) ತಾಳ್ಮೆಯ ಬಗ್ಗೆ ಪೋಸ್ಟ್ ಮಾಡಿರೋದು ಚರ್ಚೆಗೆ ಗ್ರಾಸವಾಗಿದೆ. ಯಾರಿಗೆ ಪವಿತ್ರಾ ಟಾಂಗ್ ಕೊಡುತ್ತಿದ್ದಾರೆ ಎಂದೆಲ್ಲಾ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

Share This Article