ಧಾರವಾಡ | ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ – ಬ್ಯಾಂಕ್ ಮ್ಯಾನೇಜರ್ ಸಾವು

Public TV
1 Min Read
Dharwad accident copy

ಧಾರವಾಡ: ಇಲ್ಲಿನ ತೇಗೂರು(Tegur) ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬ್ಯಾಂಕ್ ಮ್ಯಾನೇಜರ್(Bank Manager) ಒಬ್ಬರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಮಧ್ಯಪ್ರದೇಶ ಮೂಲದ ಬೆಳಗಾವಿ ಕೆನರಾ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಆಗಿದ್ದ ರಾಹುಲ್ ಶುಕ್ಲಾ (40) ಮೃತ ದುರ್ದೈವಿ. ಇದನ್ನೂ ಓದಿ: ಹಾಸನ | ಕಾಡಾನೆ ದಾಳಿಗೆ ಮಹಿಳೆ ಬಲಿ – ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ

ಧಾರವಾಡ ಕಡೆಯಿಂದ ವಾಪಸ್ ಬೆಳಗಾವಿ ಕಡೆಗೆ ತೆರಳುತ್ತಿದ್ದ ಸಂದರ್ಭ ಎದುರು ಹೋಗುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ರಾಹುಲ್ ಶುಕ್ಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಪರಂ ವಿರುದ್ಧದ ಷಡ್ಯಂತ್ರಕ್ಕೆ ಕಾಂಗ್ರೆಸ್‌ನ ಮಹಾನಾಯಕನೇ ಸೂತ್ರಧಾರ: ಹೆಚ್‌ಡಿಕೆ ಬಾಂಬ್

ಪತ್ನಿ ಶ್ರೇಯಾ ಶುಕ್ಲಾ (35) ಹಾಗೂ ಮೂರು ವರ್ಷದ ಮಗಳು ಕಿಯಾನಾ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ತಮನ್ನಾನು ಬೇಡ, ಸುಮನ್ನಾನು ಬೇಡ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ರಾಯಭಾರಿ ಆಗ್ತೀನಿ: ವಾಟಾಳ್ ನಾಗರಾಜ್

ಅಪಘಾತ ಸಂಭವಿಸುತ್ತಿದ್ದಂತೆ ಲಾರಿ ನಿಲ್ಲಿಸದ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article