ಮುಂಬೈ: ಮಹಾರಾಷ್ಟ್ರದ ನಾಗ್ಪುರದ (Nagpur) ಹಾರ್ಸ್ ರೈಡಿಂಗ್ ಅಕಾಡೆಮಿಯಲ್ಲಿ (Horse Riding Academy ) ಕುದುರೆಯ (Horse) ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಚೋಟ್ಯಾ ಸುಂದರ್ ಖೋಬ್ರಗಡೆ ಎಂದು ಗುರುತಿಸಲಾಗಿದೆ. ಆರೋಪಿ ಮೇ 17 ರಂದು ಗಿಟ್ಟಿಖಾದನ್ ಪ್ರದೇಶದಲ್ಲಿರುವ ಜಿಲ್ಲಾ ಹಾರ್ಸ್ ರೈಡಿಂಗ್ ಅಕಾಡೆಮಿ ಆವರಣಕ್ಕೆ ರಾತ್ರಿ ವೇಳೆ ಅತಿಕ್ರಮವಾಗಿ ಪ್ರವೇಶಿಸಿದ್ದಾನೆ. ಬಳಿಕ ಕುದುರೆ ಒಂದರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದನ್ನು ಗಮನಿಸಿದ ಭದ್ರತಾ ಸಿಬ್ಬಂದಿ, ಅಕಾಡೆಮಿಯ ಮೇಲ್ವಿಚಾರಕರಿಗೆ ಮಾಹಿತಿ ರವಾನಿಸಿದ್ದಾರೆ.
ಆರೋಪಿಯ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆರೋಪಿ ವಿರುದ್ಧ ಅಕಾಡೆಮಿಯ ಸಿಬ್ಬಂದಿ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯ ವಿರುದ್ಧ ಬಿಎನ್‌ಎಸ್ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ವಿರುದ್ಧ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.