ಬೆಂಗಳೂರು: ಮೇ 24ರಿಂದ ಮೇ 28ರವರೆಗೆ ರಾಜ್ಯದೆಲ್ಲೆಡೆ ಭಾರೀ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಭಾಗದಲ್ಲಿ ವ್ಯಾಪಕ ಮಳೆಯ ಎಚ್ಚರಿಕೆಯನ್ನು ನೀಡಿದ್ದು, ಮೇ 24ರಿಂದ ಮೇ 27ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ದೇವರಿಗೆ ಕೈ ಮುಗಿದು ತಾಳಿ ಕದ್ದ – ಅಡವಿಡಲು ಹೋಗಿ ತಗ್ಲಾಕೊಂಡ
ಬೆಳಗಾವಿ, ಹಾಸನ, ಧಾರವಾಡ, ಚಾಮರಾಜನಗರ ಜಿಲ್ಲೆಗೆ ಆರೆಂಟ್ ಅಲರ್ಟ್ ಘೋಷಿಸಿದ್ದು, ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: CET: ನೋಂದಣಿ ಸಂಖ್ಯೆ ನಮೂದಿಸುವಲ್ಲಿ ದೋಷ – ಕೆಇಎ
ಬೆಂಗಳೂರಿನಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಮೇ 24ರಿಂದ ಮೇ 28 ರವೆರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗುಡುಗು, ಸಹಿತ ಬಿರುಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿಎಸ್ ಪಾಟೀಲ್ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ 35 ಕೋವಿಡ್ ಸಕ್ರಿಯ ಕೇಸ್, ಆತಂಕಪಡಬೇಕಿಲ್ಲ: ದಿನೇಶ್ ಗುಂಡೂರಾವ್