ತಿರುನಂತಪುರಂ: ಕೊಚ್ಚಿಗೆ ಬರುತ್ತಿದ್ದ ಸರಕು ಸಾಗಣೆ ಹಡಗಿನಲ್ಲಿದ್ದ ತೈಲ ತುಂಬಿದ ಕಂಟೇನರ್‌ಗಳು (Oil Containers) ಸಮುದ್ರ ಪಾಲಾಗಿವೆ. ಸುಮಾರು 10 ಕಂಟೇನರ್‌ಗಳು ಸಮುದ್ರ ಪಾಲಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಯಾಗಿದೆ.
Update :
21 crew members rescued, 03 crew (Captain, Chief Engg and 2nd Engg) remain onboard to facilitate planned salvage operations.
ICG and IN ships along with ICG aircrafts continue to coordinate and monitor the situation.
Some containers have fallen due to vessel tilting,… https://t.co/rqIxYVgMLH pic.twitter.com/RYkHgNVPQs
— PRO Defence Kochi (@DefencePROkochi) May 24, 2025
ಆದ್ದರಿಂದ ಕಂಟೇನರ್‌ಗಳು ದಡಕ್ಕೆ ಬಂದ್ರೆ ಅವುಗಳ ಬಳಿ ತೆರಳದಂತೆ ಕೇರಳ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಪ್ರಾಧಿಕಾರವು (KSDMA) ಸಾರ್ವಜನಿಕರಿಗೆ ಎಚ್ಚರಿಸಿದೆ. ಈಗಾಗಲೇ ಸ್ಥಳಕ್ಕೆ ಧಾವಿಸಿರುವ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ಇದನ್ನೂ ಓದಿ: ಮೇ 26ರಿಂದ 2 ದಿನ ಮೋದಿ ಗುಜರಾತ್ ಪ್ರವಾಸ – 53,414 ಕೋಟಿ ರೂ. ವೆಚ್ಚದ ಯೋಜನೆಗಳ ಉದ್ಘಾಟನೆ
ಕೊಚ್ಚಿ ಕರಾವಳಿಯಿಂದ ನೈರುತ್ಯಕ್ಕೆ 38 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಅರಬ್ಬಿ ಸಮುದ್ರದಲ್ಲಿ (Arabian Sea) ಅಪಘಾತ ಸಂಭವಿಸಿದೆ. ಲೈಬೀರಿಯಾ ಧ್ವಜ ಹೊತ್ತಿದ್ದ ಹಡಗು ವಿಝಿಂಜಂನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದಾಗ ಒಂದು ಭಾಗಕ್ಕೆ ವಾಲಿದ್ದರಿಂದ ಸುಮಾರು 10 ಕಂಟೇನರ್‌ಗಳು ಸಮುದ್ರಕ್ಕೆ ಬಿದ್ದಿವೆ ಎಂದು ವರದಿಗಳು ತಿಳಿಸಿವೆ.
@IndiaCoastGuard #MRCC, #Mumbai received a Distress Alert regarding Liberia-flagged container vessel MSC ELSA 3 developing 26° list approx 38 nautical miles southwest of #Kochi. Vessel departed #Vizhinjam Port on 23 May 25, bound for #Kochi with ETA 24 May 25. #ICG is actively… pic.twitter.com/U7SzOBsE9h
— Indian Coast Guard (@IndiaCoastGuard) May 24, 2025
ಹಡಗಿನಲ್ಲಿದ್ದ ಎಲ್ಲ 24 ಸಿಬ್ಬಂದಿಯನ್ನ ಕರಾವಳಿ ಕಾವಲು ಪಡೆ ಮತ್ತು ನೌಕಾಪಡೆ ರಕ್ಷಿಸಿದೆ. ಕಂಟೇನರ್‌ಗಳಲ್ಲಿ ಮರೀನ್ ಗ್ಯಾಸ್ ಆಯಿಲ್ (ಹಡಗು, ನೌಕೆಗಳಲ್ಲಿ ಬಳಸುವ ಇಂಧನ) ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಇದನ್ನೂ ಓದಿ: 25,000 ರೂ.ಗೆ ಜೀತಕ್ಕಿರಿಸಿದ್ದ ಮಗ ಸಾವು – ರಹಸ್ಯವಾಗಿ ಸಮಾಧಿಯಲ್ಲಿ ಹೂತಿಟ್ಟಿದ್ದ ಮಾಲೀಕ ಅರೆಸ್ಟ್
‘ಅಪಾಯಕಾರಿ ವಸ್ತು’ ಹೊಂದಿರುವ ಕಂಟೇನರ್‌ಗಳು ಸಮುದ್ರಕ್ಕೆ ಬಿದ್ದಿದ್ದು, ಅವು ದಡಕ್ಕೆ ಸೇರಬಹುದು ಎಂದು ಕರಾವಳಿ ಕಾವಲು ಪಡೆ ಎಚ್ಚರಿಸಿದೆ. ಒಂದು ವೇಳೆ ದಡದಲ್ಲಿ ತೇಲುತ್ತಿರುವ ವಸ್ತುಗಳು ಕಂಡುಬಂದ್ರೆ, ಜನ ಅವುಗಳ ಹತ್ತಿರಕ್ಕೆ ಹೋಗದೇ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುವಂತೆ ಕಾವಲು ಪಡೆ ಸೂಚನೆ ನೀಡಿದೆ. ಇದನ್ನೂ ಓದಿ: ವಿಧಾನಸೌಧ ಗೈಡೆಡ್ ಟೂರ್‌ಗೆ ಭಾನುವಾರ ಚಾಲನೆ – ಜೂ.1ರಿಂದ ಸಾರ್ವಜನಿಕರಿಗೆ ಪ್ರವೇಶ, ಶುಲ್ಕ ಪ್ರಕಟ