– ಅಂತ್ಯಸಂಸ್ಕಾರಕ್ಕೂ ಬಾರದ ಮಗಳು
– ಹಿರಿಯ ಮಗಳ ಪ್ರೀತಿ ಮೂವರನ್ನು ಬಲಿಪಡೆಯಿತು: ಗ್ರಾಮಸ್ಥರ ಆಕ್ರೋಶ
ಮೈಸೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮರ್ಯಾದೆಗೆ ಅಂಜಿ ಕಾಲುಗಳಿಗೆ ಹಗ್ಗ ಕಟ್ಟಿ ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಶನಿವಾರ ಮೈಸೂರಿನ ಹೆಚ್‌ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.
ಮಹದೇವಸ್ವಾಮಿ, ಪತ್ನಿ ಮಂಜುಳಾ ಹಾಗೂ ಕಿರಿಯ ಮಗಳು ಹರ್ಷಿತಾ ಮೃತ ದುರ್ದೈವಿಗಳು. ಇದನ್ನೂ ಓದಿ: ಪ್ರೀತಿಸಿದವನೊಂದಿಗೆ ಮನೆಬಿಟ್ಟು ಹೋದ ಮಗಳು – ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಕಾನೂನು ಪದವಿ ಓದಿದ ಮಗಳ ತೀರ್ಮಾನಕ್ಕೆ ಕುಟುಂಬವೊಂದು ದಾರುಣ ಅಂತ್ಯ ಕಂಡಿದೆ. ಹೌದು, ಮಗಳ ನಿರ್ಧಾರದಿಂದ ಮರ್ಯಾದೆ ಹೋಯಿತೆಂದು ಕಾಲಿಗೆ ಹಗ್ಗ ಕಟ್ಟಿಕೊಂಡು ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ‘ಬ್ರೋಕನ್ ಹಾರ್ಟ್ ಸಿಂಡ್ರೋಮ್’; ಇದು ಹೃದಯದ ಮಾತು – ಪುರುಷರೇ ಜೋಕೆ!
ಮಹದೇವಸ್ವಾಮಿ ಅವರಿಗೆ ಅರ್ಪಿತಾ ಹಾಗೂ ಹರ್ಷಿತಾ ಎಂಬ ಇಬ್ಬರು ಹೆಣ್ಣುಮಕ್ಕಳು. ಮಹದೇವಸ್ವಾಮಿ ಕುಟುಂಬ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಊರು ಬಿಟ್ಟು ಹೆಚ್‌ಡಿ.ಕೋಟೆಯಲ್ಲಿ ವಾಸವಿದ್ದರು. ಅಲ್ಲಿಯೂ ಸ್ವಂತ ಮನೆ ಖರೀದಿ ಮಾಡಿದ್ದರು. ಹಿರಿಯ ಮಗಳು ಅರ್ಪಿತಾ ಮೈಸೂರಿನಲ್ಲಿ ಕಾನೂನು ಪದವಿ ಓದುತ್ತಿದ್ದಳು. ಎರಡನೇ ಮಗಳು ಬಿ.ಸಿ.ಎ ವ್ಯಾಸಂಗ ಮಾಡುತ್ತಿದ್ದಳು.
ಅರ್ಪಿತಾ ಮೈಸೂರಿನಲ್ಲಿ ಅನ್ಯಜಾತಿಯ ಹುಡುಗನ ಜೊತೆ ಪ್ರೀತಿಗೆ ಬಿದ್ದು, ಆತನನ್ನೇ ಮದುವೆ ಆಗುವುದಾಗಿ ಪಟ್ಟು ಹಿಡಿದಿದ್ದಳು. ತಂದೆ ಮಹದೇವಸ್ವಾಮಿ ಸಮುದಾಯದ ಜನರಿಗೆ ಹೆದರಿ ಮದುವೆ ನಿರಾಕರಿಸಿದ್ದರು. ತಂದೆ, ತಾಯಿ ನಿರ್ಧಾರವನ್ನು ಧಿಕ್ಕರಿಸಿ ಅರ್ಪಿತಾ ಮನೆ ಬಿಟ್ಟು ತೆರಳಿದ್ದಳು. ಮಗಳ ಈ ನಿರ್ಧಾರದಿಂದ ಮರ್ಯಾದೆ ಹೋಯಿತು ಎಂದು ಭಾವಿಸಿ ಮಹದೇವಸ್ವಾಮಿ, ಪತ್ನಿ ಹಾಗೂ ಕಿರಿಯ ಮಗಳ ಸಮೇತ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದನ್ನೂ ಓದಿ: ಮುಂಗಾರು ಮಳೆ ಮತ್ತೆ ಬರಲಿ – ಜೀವನದುದ್ದಕ್ಕೂ ಒಂದೇ ಕೊಡೆಯಡಿ ನಡೆದು ಬಿಡೋಣ!
ಮಳೆಯಲ್ಲೇ ಶನಿವಾರ ರಾತ್ರಿ ಮೃತರ ಮರಣೋತ್ತರ ಪರೀಕ್ಷೆ ಮಾಡಲಾಗಿತ್ತು. ಮಗ, ಸೊಸೆ ಹಾಗೂ ಮೊಮ್ಮಗಳ ಸಾವಿನಿಂದ ದಿಕ್ಕೇ ತೋಚದಂತೆ ಕುಳಿತ ವೃದ್ಧ ತಂದೆ ಹಾಗೂ ಮಗನ ಸಾವಿನ ದಿಗ್ಭ್ರಮೆಯಲ್ಲಿ ತಾಯಿ ಕಣ್ಣೀರ ಕೋಡಿ ಹರಿಸಿದ್ದಾರೆ. ಮೃತದೇಹಗಳ ಎದುರು ಮಹದೇವಸ್ವಾಮಿ ಅವರ ತಾಯಿ ಮುಂದೆ ನಾನು ಏನು ಮಾಡಲಿ ಎಂದು ಅತ್ತು ಕರೆಯುತ್ತಾ ಗೋಳಾಡಿದರು. ಮಹದೇವಸ್ವಾಮಿ ಅವರ ಜಮೀನಲ್ಲೇ ಒಂದೇ ಚಿತೆಯಲ್ಲಿ ಸಾಲಾಗಿ ಮಲಗಿಸಿ ತಂದೆ, ತಾಯಿ ಹಾಗೂ ಮಗಳ ಅಂತ್ಯಸಂಸ್ಕಾರವನ್ನು ಗ್ರಾಮಸ್ಥರು ನೆರವೇರಿಸಿದರು. ಇದನ್ನೂ ಓದಿ: ತಮ್ಮನ್ನಾರನ್ನ ವಿರೋಧಿಸುವುದಾದ್ರೆ ಅವರ ಸಿನಿಮಾಗಳನ್ನೂ ನೋಡಬೇಡಿ: ಮಧು ಬಂಗಾರಪ್ಪ
ಮನೆ ತೊರೆದಿದ್ದ ಹಿರಿಯ ಮಗಳು ಅರ್ಪಿತಾ, ತಂದೆ, ತಾಯಿ ಹಾಗೂ ಸಹೋದರಿಯ ಅಂತಿಮ ದರ್ಶನಕ್ಕೂ ಬರಲಿಲ್ಲ. ಹಿರಿಯ ಮಗಳ ಈ ನಡೆಗೆ ಗ್ರಾಮಸ್ಥರೆಲ್ಲ ಆಕ್ರೋಶ ಹೊರಹಾಕಿದ್ದಾರೆ. ಮಗಳ ತೀರ್ಮಾನದಿಂದಲೇ ಮನನೊಂದು ಕುಟುಂಬ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದೆ ಎಂದು ಹಿರಿಯ ಮಗಳಿಗೆ ಗ್ರಾಮಸ್ಥರು ಛೀಮಾರಿ ಹಾಕಿದ್ದಾರೆ.