ದರ್ಶನ್ ಜೊತೆ ವಿಜಯಲಕ್ಷ್ಮಿ ಎತ್ತಿನಗಾಡಿ ಸವಾರಿ – ವಿಡಿಯೋ ನೋಡಿ ಫ್ಯಾನ್ಸ್ ಫುಲ್ ಖುಷ್

Public TV
1 Min Read
vijayalakshmi 1 1

ಟ ದರ್ಶನ್ (Darshan) ಜೊತೆ ಪತ್ನಿ ವಿಜಯಲಕ್ಷ್ಮಿ (Vijayalakshmi) ಎತ್ತಿನಗಾಡಿಯಲ್ಲಿ ಸವಾರಿ ಮಾಡಿರುವ ವಿಡಿಯೋವನ್ನು ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ.

Darshan and Vijayalakshmi

ಪತಿ ದರ್ಶನ್ ಜೊತೆ ಎತ್ತಿನಗಾಡಿಯಲ್ಲಿ ವಿಜಯಲಕ್ಷ್ಮಿ ರೌಂಡ್ ಹೊಡೆದಿದ್ದಾರೆ. ಎತ್ತಿನಗಾಡಿಯಲ್ಲಿ ಸವಾರಿ ಮಾಡ್ತಿರೋ ವಿಡಿಯೋವನ್ನು ಇನ್ಸ್ಟಾ ಸ್ಟೋರಿಯಲ್ಲಿ ಶೇರ್ ಮಾಡಿ, ಸೂರ್ಯ ಮತ್ತು ಚಂದ್ರ ನಮ್ಮ ಸ್ಟಾರ್ ಎಂದು ಕ್ಯಾಪ್ಷನ್ ಕೊಟ್ಟಿದ್ದಾರೆ. ಇದನ್ನೂ ಓದಿ:‘ಬಿಗ್ ಬಾಸ್’ ಬಳಿಕ ಬಿಗ್ ನ್ಯೂಸ್ ಕೊಟ್ರು ಮೋಕ್ಷಿತಾ ಪೈ!

vijayalakshmi darshan

ಮೇ 19ರಂದು ದರ್ಶನ್ ಮತ್ತು ವಿಜಯಲಕ್ಷ್ಮಿ 22ನೇ ವೆಡ್ಡಿಂಗ್ ಆ್ಯನಿವರ್ಸರಿ ಆಚರಿಸಿಕೊಂಡಿದ್ದರು. ಆ ದಿನ ರೆಸಾರ್ಟ್‌ವೊಂದರಲ್ಲಿ ಇಬ್ಬರೂ ಕೇಕ್ ಕತ್ತರಿಸಿ, ಮಸ್ತ್ ಆಗಿ ಡ್ಯಾನ್ಸ್ ಮಾಡಿ ಸಂಭ್ರಮಿಸಿದ್ದರು. ಇದನ್ನೂ ಓದಿ:‘ಮಾರ್ನಮಿ’ಗೆ ಮೋಹಕ ತಾರೆ ರಮ್ಯಾ ಸಾಥ್ – ರಿವೀಲಾಯ್ತು ಚೈತ್ರಾ ಆಚಾರ್ ರೋಲ್

darshanರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೇಲ್ ಮೇಲೆ ದರ್ಶನ್ ಹೊರಬಂದ್ಮೇಲೆ ಪತಿಯ ವ್ಯವಹಾರವನ್ನು ವಿಜಯಲಕ್ಷ್ಮಿಯವರೇ ನೋಡಿಕೊಳ್ತಿದ್ದಾರೆ. ದರ್ಶನ್‌ಗೆ ಎಲ್ಲೇ ಶೂಟಿಂಗ್ ಇದ್ರೂ ಅಥವಾ ಯಾವುದೇ ಕಾರ್ಯಕ್ರಮ ಆಗಿದ್ರೂ ಪತ್ನಿ ಜೊತೆಯಲ್ಲಿ ಇರುತ್ತಾರೆ. ಇದು ಫ್ಯಾನ್ಸ್ಗೆ ಖುಷಿ ಕೊಟ್ಟಿದೆ. ಈ ಜೋಡಿ ಮೇಲೆ ಕೆಟ್ಟ ದೃಷ್ಟಿ ಬೀಳದಿರಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

ಇದೆಲ್ಲದರ ನಡುವೆ, ಡೆವಿಲ್ ಸಿನಿಮಾದ ಚಿತ್ರೀಕರಣವು ಭರದಿಂದ ಸಾಗುತ್ತಿದೆ. ದರ್ಶನ್ ಜೊತೆ ರಚನಾ ರೈ, ವಿನಯ್ ಗೌಡ, ಶರ್ಮಿಳಾ ಮಾಂಡ್ರೆ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ತಾರಕ್ ಡೈರೆಕ್ಟರ್ ಮಿಲನಾ ಪ್ರಕಾಶ್ ‘ಡೆವಿಲ್’ ಚಿತ್ರದ ನಿರ್ದೇಶನ ಮಾಡುತ್ತಿದ್ದಾರೆ.

Share This Article