– ಆತಂಕದಲ್ಲಿ ಓಡಾಡುತ್ತಿರೋ ವಾಹನ ಸವಾರರು
ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಪರಿಣಾಮ ಶಿರಾಡಿಘಾಟ್ (Shiradi Ghat) ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ.
ಸಕಲೇಶಪುರ (Sakaleshpura) ತಾಲ್ಲೂಕಿನ ದೋಣಿಗಾಲ್ ಬಳಿ ಘಟನೆ ನಡೆದಿದೆ. ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ ರಸ್ತೆಯ ಎರಡು ಬದಿಗಳಲ್ಲಿ ಕೆಲಸಗಾರರು 90 ಡಿಗ್ರಿ ಮಾದರಿಯಲ್ಲಿ ನೂರು ಅಡಿಗಳಷ್ಟು ಬಗೆದಿದ್ದಾರೆ. ಸಕಲೇಶಪುರ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಗೆ ಮಣ್ಣು ಕುಸಿತ ಕಂಡಿದೆ. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ; ಮಳೆಗೆ ಕೊಚ್ಚಿಹೋದ 15 ವಾಹನಗಳು
ತಡೆಗೋಡೆ ನಿರ್ಮಿಸಿದ್ದರೂ, ಮೇಲಿನಿಂದ ರಸ್ತೆಗೆ ಮಣ್ಣು ಕುಸಿಯುತ್ತಿದೆ. ಮೇಲ್ಭಾಗದಲ್ಲಿರುವ ಕಾಫಿ, ಸಿಲ್ವರ್ ಹಾಗೂ ಇತರೆ ಮರಗಳು ಮಣ್ಣಿನ ಸಮೇತ ನೆಲಕ್ಕುರುಳಿವೆ. ಬಿರುಗಾಳಿ ಸಹಿತ ಮಳೆ ಸುರಿಯುತ್ತಿರುವುದರಿಂದ ಭೂಕುಸಿತ ಆಗಿದೆ. ವಾಹನ ಸವಾರರು ಆತಂಕದಿಂದ ಪ್ರಯಾಣಿಕರು ಪರಿಸ್ಥಿತಿ ಎದುರಾಗಿದೆ.
ವೀಕೆಂಡ್ ಹಿನ್ನೆಲೆಯಲ್ಲಿ ಶಿರಾಡಿಘಾಟ್ ರಸ್ತೆಯಲ್ಲಿ ವಾಹನಗಳ ಓಡಾಟ ಹೆಚ್ಚಾಗಿದೆ. ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ಭಾರೀ ಮಳೆ – ರಸ್ತೆಯಲ್ಲಿ ಹೊಳೆಯಂತೆ ಹರಿದ ನೀರು, ಧರೆಗುರುಳಿದ ಮರಗಳು