ಪೃಥ್ವಿ ಅಂಬರ್ (Pruthvi Ambaar) ಹಾಗೂ ಧನ್ಯಾ ರಾಮ್‌ಕುಮಾರ್ (Dhanya Ramkumar) ನಟನೆಯ ‘ಚೌಕಿದಾರ್’ ಸಿನಿಮಾದ (Chowkidar) ಟೀಸರ್ ಬಿಡುಗಡೆಯಾಗಿದೆ. ರಕ್ತಸಿಕ್ತ ಅವತಾರವೆತ್ತಿರುವ ಪೃಥ್ವಿ ಹೊಸ ಲುಕ್ ಸಿನಿರಸಿಕರಿಗೆ ಕಿಕ್ ಕೊಟ್ಟಿದೆ. ನಾಯಕಿ ಧನ್ಯಾ ಡಿ ಗ್ಲಾಮ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ದರ್ಶನ್ ಜೊತೆ ವಿಜಯಲಕ್ಷ್ಮಿ ಎತ್ತಿನಗಾಡಿ ಸವಾರಿ – ವಿಡಿಯೋ ನೋಡಿ ಫ್ಯಾನ್ಸ್ ಫುಲ್ ಖುಷ್
ಟೀಸರ್‌ನಲ್ಲಿ ಎಲ್ಲಾ ಪಾತ್ರಗಳನ್ನು ತೋರಿಸಿರುವ ಚಂದ್ರಶೇಖರ್ ಬಂಡಿಯಪ್ಪ ಕಥೆಯ ಗುಟ್ಟನ್ನು ಎಲ್ಲಿಯೂ ಬಿಟ್ಟುಕೊಟ್ಟಿಲ್ಲ. ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಟೀಸರ್ ಬಿಡುಗಡೆ ಮಾಡಲಾಗಿದ್ದು, ಖಾಕಿ ಲುಕ್‌ನಲ್ಲಿ ಸುಧಾರಾಣಿ ಖದರ್ ತೋರಿಸಿದ್ದಾರೆ. ಹಿರಿಯ ನಟ ಸಾಯಿ ಕುಮಾರ್ ಪೃಥ್ವಿ ತಂದೆ ಪಾತ್ರದಲ್ಲಿ ಗಮನ ಸೆಳೆಯುತ್ತಾರೆ. ಧರ್ಮ, ಹಿರಿಯ ನಟಿ ಶ್ವೇತಾ ತಾರಾಬಳಗದಲ್ಲಿದ್ದಾರೆ.
ಸಚಿನ್ ಬಸ್ರೂರ್ ಸಂಗೀತ ಟೀಸರ್‌ನಲ್ಲಿ ಗಮನ ಸೆಳೆಯುತ್ತಿದೆ. ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ. ವಿದ್ಯಾದೇವಿ ನಿರ್ಮಾಣದಲ್ಲಿ ಸಾಥ್ ಕೊಡುತ್ತಿದ್ದಾರೆ. ವಿ.ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ, ಸಂತೋಷ್ ನಾಯಕ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಸಿದ್ದು ಕಂಚನಹಳ್ಳಿ ಛಾಯಾಗ್ರಹಣ, ಪೃಥ್ವಿರಾಜ್ ಧಘಾರಿ ಸಹನಿರ್ದೇಶನ ಸಿನಿಮಾಗಿದೆ.
‘ಚೌಕಿದಾರ್’ ಬಹುಭಾಷೆಯಲ್ಲಿ ಮೂಡಿ ಬರುತ್ತಿದ್ದು, ಟೀಸರ್ ನೋಡುತ್ತಿದ್ದರೇ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಯಾವುದೋ ಹೊಸ ಕಥೆಯನ್ನು ಹರವಿಡಲು ಹೊರಟಿರುವುದು ಗೊತ್ತಾಗುತ್ತಿದೆ. ಇದನ್ನೂ ಓದಿ:ಮಡೆನೂರು ಮನು ವಿವಾದದಲ್ಲಿ ಅಪ್ಪಣ ಹೆಸರು ತಳುಕು – ನಟ ಹೇಳಿದ್ದೇನು?
ಅಂದಹಾಗೆ, ಜೂನ್ 1ರಂದು ‘ಚೌಕಿದಾರ್’ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡಲಿದೆ. ಶೀಘ್ರದಲ್ಲೇ ರಿಲೀಸ್ ಡೇಟ್ ಅನ್ನು ಚಿತ್ರತಂಡ ರಿವೀಲ್ ಮಾಡಲಿದೆ.