ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮಳೆಯಾಗುತ್ತಿದೆ. ಇದರಿಂದ ಮೇ 30ರವರೆಗೆ ಮಳೆ ಮುಂದುವರೆಯಲಿದೆ. ಮುಂದಿನ ನಾಲ್ಕು ದಿನಗಳ ವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಇದನ್ನೂ ಓದಿ: ಬೆಳಗಾವಿ | ಭಾರೀ ಮಳೆಗೆ ಮನೆ ಗೋಡೆ ಕುಸಿತ – ಮೂರು ವರ್ಷದ ಮಗು ದುರ್ಮರಣ
ಮಳೆ ಹೆಚ್ಚಳವಾಗುವ ಸಾಧ್ಯತೆ ಇದ್ದು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಐದು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ ವಿಜಯಪುರ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಸೋಮವಾರ ಬೆಳಗ್ಗೆ ವಿರಾಜಪೇಟೆಯಲ್ಲಿ ಅತಿಹೆಚ್ಚು ಮಳೆಯಾದ ವರದಿಯಾಗಿದೆ. 27 ಸೆ.ಮೀ ಮಳೆ, ಬಾಗಮಂಡಲದಲ್ಲಿ 23 ಸೆ.ಮೀ ಹಾಗೂ ಮುಲ್ಕಿಯಲ್ಲಿ 20 ಸೆಂ.ಮೀ ಮಳೆಯಾಗಿದೆ. ಬೆಂಗಳೂರಲ್ಲಿ ಸಾಧರಣ ಮಳೆಯಾಗುತ್ತಿದೆ. ಇದನ್ನೂ ಓದಿ: ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆ – ಕೆಆರ್‌ಎಸ್‌ಗೆ ಹೆಚ್ಚಿದ ಒಳಹರಿವು