ಬಾಲಿವುಡ್ ನಟ ಆಮೀರ್ ಖಾನ್ (Aamir Khan) ಅವರು ಗೆಳತಿ ಗೌರಿ (Gauri Spratt) ಜೊತೆ ಲಂಚ್ ಡೇಟಿಂಗ್‌ಗೆ ತೆರಳಿದ್ದಾರೆ. ಇಬ್ಬರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಇದನ್ನು ನೋಡಿ ಅಭಿಮಾನಿಗಳು ಇಬ್ಬರ ಮದುವೆ ಯಾವಾಗ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ:ಫ್ಯಾಮಿಲಿ ಜೊತೆ ಅಮೂಲ್ಯ ಕ್ಯೂಟ್ ಫೋಟೋಶೂಟ್
ಗೆಳತಿ ಗೌರಿ ವಿಚಾರಕ್ಕೆ ಆಮೀರ್ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ನಿನ್ನೆ (ಮೇ 25) ಮಧ್ಯಾಹ್ನ ರೆಸ್ಟೋರೆಂಟ್‌ವೊಂದಕ್ಕೆ ಗೌರಿ ಜೊತೆ ಆಮೀರ್ ಊಟಕ್ಕೆ ತೆರಳಿದ್ದಾರೆ. ಈ ವೇಳೆ, ಮಗ ಆಜಾದ್ ಕೂಡ ಸಾಥ್ ನೀಡಿದ್ದಾರೆ. ಒಂದೊಳ್ಳೆ ಊಟ ಮಾಡಿ ಕೆಲ ಕಾಲ ಸಮಯ ಕಳೆದಿದ್ದಾರೆ. ಆ ನಂತರ ಮನೆಗೆ ತೆರಳುವಾಗ ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದ್ದಾರೆ. ಇಬ್ಬರ ಒಡನಾಟ ನೋಡಿ ಫ್ಯಾನ್ಸ್ ಮದುವೆ ಬಗ್ಗೆ ಗುಡ್ ನ್ಯೂಸ್ ಕೊಡಿ ಎಂದೆಲ್ಲಾ ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ:ದೀಕ್ಷಿತ್ ಶೆಟ್ಟಿ ನಿರ್ಮಾಣದ ‘ವಿಡಿಯೋ’ ಚಿತ್ರದ ಟೀಸರ್ ರಿಲೀಸ್
View this post on Instagram
ಅಂದಹಾಗೆ, ಮಾ.14ರಂದು ಆಮೀರ್ ಖಾನ್ 60ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿದ್ದರು. ಈ ವೇಳೆ, ಮಾಧ್ಯಮದ ಜೊತೆ ಡೇಟಿಂಗ್ ಬಗ್ಗೆ ಅಧಿಕೃತವಾಗಿ ತಿಳಿಸಿದ್ದರು. ಗೌರಿ ಜೊತೆ 1 ವರ್ಷದಿಂದ ಡೇಟಿಂಗ್ ಮಾಡುತ್ತಿದ್ದೇನೆ. ಅವರನ್ನು ಕಳೆದ 25 ವರ್ಷಗಳಿಗಿಂತ ಹೆಚ್ಚಿನ ಕಾಲದಿಂದ ಪರಿಚಿತರು ಎಂದು ಹೇಳಿದ್ದಾರೆ. ಗೌರಿ ಬೆಂಗಳೂರಿನಲ್ಲಿ ವಾಸಿಸುತ್ತಿದ್ದು, ತಮ್ಮದೇ ನಿರ್ಮಾಣದ ಸಂಸ್ಥೆಯಡಿಯಲ್ಲಿ ಕೆಲಸ ಮಾಡುತ್ತಿರೋದಾಗಿ ಆಮೀರ್ ಮಾಹಿತಿಯನ್ನು ಹಂಚಿಕೊಂಡಿದ್ದರು. ಗೌರಿಗೆ 6 ವರ್ಷದ ಮಗನಿದ್ದು, ನಾನು ಅವರೊಂದಿಗೆ ವಾಸಿಸುತ್ತಿದ್ದೇನೆ. ನಮ್ಮ ಕುಟುಂಬಸ್ಥರನ್ನು ಆಕೆ ಭೇಟಿಯಾಗಿದ್ದಾರೆ. ನಮ್ಮ ಸಂಬಂಧದ ಬಗ್ಗೆ ಮನೆಯವರಿಗೂ ಖುಷಿಯಿದೆ ಎಂದು ನಟ ಹೇಳಿದ್ದರು.
ಆಮೀರ್ ಖಾನ್ ನಟಿಸಿ ನಿರ್ಮಾಣ ಮಾಡಿರುವ ‘ಸಿತಾರೆ ಜಮೀನ್ ಪರ್’ ಚಿತ್ರ ಜೂನ್ 20ರಂದು ರಿಲೀಸ್‌ಗೆ ಸಿದ್ಧವಾಗಿದೆ. ಸಿನಿಮಾದಲ್ಲಿ ಜೆನಿಲಿಯಾ ನಾಯಕಿಯಾಗಿ ನಟಿಸಿದ್ದಾರೆ.