ಬೆಂಗಳೂರು: ಕಾಂಗ್ರೆಸ್ಸಿನವರು ಮಾನನಷ್ಟ ಮೊಕದ್ದಮೆಯ ನಾಟಕವನ್ನು ಬಿಟ್ಟು ಬಿಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ(Chalavadi Narayanswamy) ಎಂದು ಹೇಳಿದರು.
ಬೆಂಗಳೂರಿನಲ್ಲಿ(Bengaluru) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲು ಸರ್ಕಾರಕ್ಕೆ ಯಾವುದೇ ನೈತಿಕತೆ ಇಲ್ಲ. ಸರ್ಕಾರದ 5 ಗ್ಯಾರಂಟಿಗಳೂ ಅರ್ಧಕ್ಕರ್ಧ ಜನರಿಗೆ ಮುಟ್ಟಿಲ್ಲ. ಆದರೂ, 5 ಗ್ಯಾರಂಟಿಗಳ ಹೆಸರಿನಲ್ಲಿ 5 ವರ್ಷ ದೂಡಿ ಹೋಗಬೇಕೆಂಬ ಯೋಚನೆಯಲ್ಲಿ ಕಾಂಗ್ರೆಸ್(Congress) ಸರ್ಕಾರ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು. ಇದನ್ನೂ ಓದಿ: ಕರ್ನಾಟಕ ಸಿಜೆ ಸೇರಿ ಮೂವರ ಹೆಸರು ಸುಪ್ರೀಂ ಕೋರ್ಟ್ ಜಡ್ಜ್ ನೇಮಕಕ್ಕೆ ಶಿಫಾರಸು
ಯಾವುದೇ ಸಾಧನೆ ಮಾಡದೆ 2 ವರ್ಷ ಕಳೆದಿದ್ದಾರೆ. ಸಾಧನೆ ಇಲ್ಲದ ವೇದನಾ ಸಮಾವೇಶ ಮಾಡಿದ್ದಾಗಿ ಮೊದಲೇ ಹೇಳಿದ್ದೇವೆ. ಬೆಂಗಳೂರಿನ ಮಳೆಯಿಂದ ಆದ ಹಾನಿ ಪರಿಸ್ಥಿತಿ ನೋಡಲಿಲ್ಲ. ಮಳೆಯಿಂದ 5 ಜನರು ಮರಣ ಹೊಂದಿದರೂ ಗಮನಿಸಲಿಲ್ಲ. ನಿಮಗೆ ಜನರ ಪ್ರಾಣ, ಮಾನ ಮುಖ್ಯವಲ್ಲ. ಕೇವಲ ಅಧಿಕಾರ ಮಾತ್ರ ಮುಖ್ಯ ಎಂಬುದನ್ನು ತೋರಿಸಿಕೊಡುತ್ತಾ ಹೋಗುತ್ತಿದ್ದೀರಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಮೈಸೂರು ರಾಜಮನೆತನಕ್ಕೆ ಟಿಡಿಆರ್ ನೀಡಲು ಸುಪ್ರೀಂ ಆದೇಶ – ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರದಿಂದ ಅರ್ಜಿ
ಇವತ್ತು ನಮ್ಮ ವಿರುದ್ಧ ಮೊಕದ್ದಮೆ ಹೂಡಿದ್ದೀರಿ. ನಮ್ಮ ಸರ್ಕಾರ ಇದ್ದಾಗ ನೀವು ಸುಳ್ಳು ಆರೋಪ ಮಾಡಿದ್ದೀರಿ. ನಿಮ್ಮ ಸರ್ಕಾರವು ಬೆಳಗ್ಗೆ ಎದ್ದು ಬಳಸುವ ಹಾಲಿನಿಂದ ಆಲ್ಕೋಹಾಲಿನವರೆಗೆ ಎಲ್ಲಾ ದರಗಳನ್ನೂ ಹೆಚ್ಚಿಸಿದೆ. ಅದನ್ನೇ ನಾವು ಹೇಳಿದ್ದೇವೆ. ಇದರಲ್ಲಿ ಸುಳ್ಳಿದೆಯೇ? ಹೆಚ್ಚಿಸಿದ ಹಾಲಿನ ದರವನ್ನು ರೈತರಿಗೆ ಕೊಟ್ಟಿದ್ದೀರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮಂಡ್ಯ | ಟ್ರಾಫಿಕ್ ಪೊಲೀಸರ ಯಡವಟ್ಟಿನಿಂದ ಪ್ರಾಣಬಿಟ್ಟ ಮಗು – ಮೂವರು ASI ಸಸ್ಪೆಂಡ್
ಪೆಟ್ರೋಲ್ ದರ, ದವಸ-ಧಾನ್ಯಗಳ ದರ ಏರಿಸಿದ್ದೀರಿ. ಸ್ಟಾಂಪ್ ಡ್ಯೂಟಿ ಏರಿಸಿದ್ದೀರಿ. ಕಸಕ್ಕೆ ತೆರಿಗೆ ವಿಧಿಸಿದ್ದೀರಿ. ನೀರಿಗೆ ಟ್ಯಾಕ್ಸ್ ಹಾಕಿದ್ದೀರಿ. ಇದಲ್ಲದೆ ನಮ್ಮ ಮೇಲೆ 40% ಭ್ರಷ್ಟಾಚಾರದ ಆರೋಪ ಮಾಡಿದ್ದೀರಿ. ಈಗ ಅವರೇ, ಕಾಂಗ್ರೆಸ್ ಮೇಲೆ 60% ಭ್ರಷ್ಟಾಚಾರದ ಆರೋಪ ಮಾಡುತ್ತಾರೆ. ಅವರ ಮುಂದೆ ನೀವು ಬೆತ್ತಲಾಗಿದ್ದೀರಿ. ನಾವು ನ್ಯಾಯಾಲಯಕ್ಕೆ ಗೌರವ ಕೊಡುತ್ತೇವೆ. ಕೇಸಿನ ವಿರುದ್ಧ ಹೋರಾಟ ಮಾಡುತ್ತೇವೆ. ಇದರಿಂದ ನೀವು ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ ಎಂದು ಸವಾಲು ಹಾಕಿದರು.