ಮಂಡ್ಯ: ಕಾವೇರಿ (Cauvery) ಜಲಾನಯನ ಪ್ರದೇಶದಲ್ಲಿ ಭಾನುವಾರದಿಂದ ಮುಂಗಾರು ಮಳೆ (Mansoon Rain) ಅಬ್ಬರಿಸುತ್ತಿರುವ ಹಿನ್ನೆಲೆ ಹಳೆ ಮೈಸೂರು (Mysuru) ಭಾಗದ ಜೀವನಾಡಿಯಾಗಿರುವ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ (KRS Dam) ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಬೀಳದ ಪರಿಣಾಮ ಕೆಆರ್‌ಎಸ್ ಡ್ಯಾಂನಲ್ಲಿ ಕೇವಲ 15 ಟಿಎಂಸಿ ನೀರು ಇತ್ತು. ಇದರಿಂದ ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು. ಆದರೆ ಭಾನುವಾರದಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಬೀಳುತ್ತಿರುವ ಮಳೆಯಿಂದ ಡ್ಯಾಂ ಭರ್ತಿಯಾಗುತ್ತದೆ ಎಂಬ ಆಶಾ ಭಾವನೆ ಜನರಲ್ಲಿ ಮೂಡಿದೆ. ಇದನ್ನೂ ಓದಿ: ಮೆಟ್ರೋ ಕಾಮಗಾರಿ ಸ್ಥಳಗಳಲ್ಲಿ ಸುಗಮ ಸಂಚಾರಕ್ಕೆ ಮುಖ್ಯರಸ್ತೆ, ಸರ್ವಿಸ್ ರಸ್ತೆ ವಿಲೀನ – ಡಿಕೆಶಿ ಸ್ಥಳ ಪರಿಶೀಲನೆ
ಇದೀಗ ಕೆಆರ್‌ಎಸ್ ಡ್ಯಾಂಗೆ 2,053 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಮಂಗಳವಾರಕ್ಕೆ ನೀರಿನ ಪ್ರಮಾಣವು 5,000 ಕ್ಯೂಸೆಕ್‌ಗೆ ಹೆಚ್ಚುವ ಸಾಧ್ಯತೆ ಇದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಡ್ಯಾಂನಲ್ಲಿ ಸದ್ಯ 89.35 ಅಡಿ ನೀರು ಇದೆ. ಇನ್ನೂ 49.452 ಟಿಎಂಸಿ ಗರಿಷ್ಠ ಸಾಮರ್ಥ್ಯ ಹೊಂದಿದ್ದು, ಈಗ 15.555 ಟಿಎಂಸಿ ನೀರಿದೆ. ಹೊರ ಹರಿವಿನ ಪ್ರಮಾಣ 347 ಕ್ಯೂಸೆಕ್ ಇದೆ.