ವಾಷಿಂಗ್ಟನ್: ಗಾಜಾದಲ್ಲಿ (Gaza) ಕದನ ವಿರಾಮ ಘೋಷಿಸುವಂತೆ ಕೋರಿ ಅಮೆರಿಕದ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್ (Steve Witkoff) ಮಂಡಿಸಿದ ಪ್ರಸ್ತಾವನೆಗೆ ಹಮಾಸ್ (Hamas) ಒಪ್ಪಿಕೊಂಡಿದೆ ಎಂದು ಪ್ಯಾಲೆಸ್ತೀನ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಈ ಪ್ರಸ್ತಾವನೆಯನ್ನು ಮಧ್ಯವರ್ತಿಗಳ ಮೂಲಕ ಹಮಾಸ್‌ಗೆ ರವಾನಿಸಲಾಗಿದೆ. ಪ್ರಸ್ತಾವನೆಯಲ್ಲಿ 70 ದಿನಗಳ ಕದನ ವಿರಾಮಕ್ಕೆ ಪ್ರತಿಯಾಗಿ ಹತ್ತು ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕೆಂದು ತಿಳಿಸಿರುವುದಾಗಿ ಅಧಿಕಾರಿ ಹೇಳಿದ್ದಾರೆ. ಇದನ್ನೂ ಓದಿ: ಸರಣಿ ಮನೆಗಳ್ಳತನ ಮಾಡ್ತಿದ್ದ ಖದೀಮ ಅಂದರ್ – 6 ಲಕ್ಷ ಮೌಲ್ಯದ ಚಿನ್ನ ವಶಕ್ಕೆ
ಮಾತ್ರವಲ್ಲದೇ ಇಸ್ರೇಲ್‌ನಿಂದ ಬಂಧನದಲ್ಲಿರುವ ಹಲವಾರು ಪ್ಯಾಲೆಸ್ಟೀನಿಯನ್ ಕೈದಿಗಳನ್ನ ಬಿಡುಗಡೆ ಮಾಡುವುದನ್ನು ಸಹ ಈ ಪ್ರಸ್ತಾವನೆ ಒಳಗೊಂಡಿದೆ. ಇದರಲ್ಲಿ ನೂರಾರು ಜನರು ದೀರ್ಘ ಶಿಕ್ಷೆ ಅನುಭವಿಸುತ್ತಿದ್ದಾರೆ. ಸದ್ಯ ಈ ಪ್ರಸ್ತಾವನೆಗೆ ಇಸ್ರೇಲ್‌ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಣೆ