ಹಾಸನ: ಭಾರೀ ಮಳೆಯಿಂದಾಗಿ ರಸ್ತೆ ಕಾಣದೇ ಕಾರು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನ (Hassan) ಜಿಲ್ಲೆಯ ಸಕಲೇಶಪುರದ (Sakaleshapura) ಬಾಗೆ ಎಂಬಲ್ಲಿ ನಡೆದಿದೆ.
ಮೃತರನ್ನು ಬೆಂಗಳೂರು (Bengaluru) ಮೂಲದ ಅಭಿಷೇಕ್ ಹಾಗೂ ಶರತ್ ಎಂದು ತಿಳಿಯಲಾಗಿದ್ದು, ಕಾರಿನಲ್ಲಿದ್ದ ಇನ್ನಿಬ್ಬರು ಯುವಕರಿಗೆ ಗಂಭೀರ ಗಾಯಗಳಾಗಿವೆ.ಇದನ್ನೂ ಓದಿ: ಪ್ರಜ್ವಲ್ ಮೊಬೈಲಿನಲ್ಲಿ 2000 ಮಹಿಳೆಯರ ಚಿತ್ರ: ಸಾಕ್ಷ್ಯ ನುಡಿದ ಚಾಲಕ
ನಾಲ್ವರು ಎರ್ಟಿಗಾ ಕಾರಿನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಬಾಗೆ ಸಮೀಪದಲ್ಲಿ ಭಾರೀ ಮಳೆಯಿಂದಾಗಿ ರಸ್ತೆ ಕಾಣದೇ ಚಾಲಕನ ನಿಯಂತ್ರಣ ತಪ್ಪಿದ್ದು, ಪರಿಣಾಮ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.ಇದನ್ನೂ ಓದಿ: ಬೆಳಗ್ಗಿನ ಉಪಹಾರಕ್ಕೆ ಸುಲಭವಾಗಿ ಮಾಡಿ ಈರುಳ್ಳಿ ಉತ್ತಪ್ಪ