ತಮಿಳಿನಿಂದ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕನ್ನಡಿಗರ ಆಕ್ರೋಶ

Public TV
1 Min Read
Kamal Haasan

ಕಾಲಿವುಡ್ ನಟ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ (Thug Life) ಜೂನ್ 5ರಂದು ರಿಲೀಸ್‌ಗೆ ಸಿದ್ಧವಾಗಿದೆ. ಈ ಚಿತ್ರದ ಪ್ರಚಾರಕ್ಕಾಗಿ ಚಿತ್ರತಂಡ ಇಂದು (ಮೇ 27) ಬೆಂಗಳೂರಿಗೆ ಆಗಮಿಸಿದೆ. ಈ ವೇಳೆ, ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದ ಕಮಲ್ ಹಾಸನ್ (Kamal Haasan) ಹೇಳಿಕೆಗೆ ಕನ್ನಡಿಗರು ರಾಂಗ್ ಆಗಿದ್ದಾರೆ. ಇದನ್ನೂ ಓದಿ:ಪ್ರಶಾಂತ್ ನೀಲ್, ಜ್ಯೂ.ಎನ್‌ಟಿಆರ್ ಸಿನಿಮಾದಲ್ಲಿ ರಶ್ಮಿಕಾ ಐಟಂ ಡ್ಯಾನ್ಸ್?

kamal haasanಬೆಂಗಳೂರಿನಲ್ಲಿ ನಡೆದ ‘ಥಗ್ ಲೈಫ್’ ಪ್ರಚಾರ ಕಾರ್ಯಕ್ಕೆ ನಟ ಶಿವಣ್ಣ (Shivarajkumar) ಅತಿಥಿಯಾಗಿ ಭಾಗವಹಿಸಿದ್ದರು. ಈ ವೇಳೆ, ರಾಜ್‌ಕುಮಾರ್ ಜೊತೆಗಿನ ಒಡನಾಡವನ್ನು ಕಮಲ್ ಹಾಸನ್ ಸ್ಮರಿಸಿದ್ದಾರೆ. ಬಳಿಕ ಶಿವಣ್ಣ ಎದುರೇ ನಿಮ್ಮ ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ನಟ ಹೇಳಿದ್ದಾರೆ. ಕನ್ನಡಿಗರ ಪ್ರೀತಿ, ಗೌರವಕ್ಕೆ ನಮಿಸುತ್ತಲೇ ನಿಮ್ಮ ಕನ್ನಡ ನಮ್ಮಿಂದ ಬಂದಿದ್ದು ಎಂದ ಕಮಲ್ ಹೇಳಿಕೆಗೆ ಕನ್ನಡಿಗರು ಕೆಂಡ ಕಾರಿದ್ದಾರೆ. ಇದನ್ನೂ ಓದಿ: ಮತ್ತೆ ಸೂಪರ್ ಹೀರೋ ಆಗಿ ತೇಜ್ ಸಜ್ಜಾ ಎಂಟ್ರಿ; ‘ಮಿರಾಯ್’ ಟೀಸರ್ ರಿಲೀಸ್‌ಗೆ ಡೇಟ್ ಫಿಕ್ಸ್

kamal haasan vikram film 1ಹೀಗಾಗಿ ಕಮಲ್ ಆಡಿರುವ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕನ್ನಡ ತಮಿಳಿನಿಂದ ಬಂದಿಲ್ಲ. ತಮಿಳಿಗಿಂತ ಕನ್ನಡ ಭಾಷೆಯೇ ಪುರಾತನವಾದದ್ದು ಎಂದು ಕನ್ನಡಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ.

‘ಥಗ್ ಲೈಫ್’ ಸಿನಿಮಾದಲ್ಲಿ ಕಮಲ್ ಹಾಸನ್ ಜೊತೆ ತ್ರಿಷಾ ಕೃಷ್ಣನ್, ಅಭಿರಾಮಿ ಸೇರಿದಂತೆ ಅನೇಕರು ನಟಿಸಿದ್ದಾರೆ. ಮಣಿರತ್ನಂ ಈ ಚಿತ್ರದ ನಿರ್ದೇಶನ ಮಾಡಿದ್ದಾರೆ.

Share This Article