ಬೆಂಗಳೂರು: ಲಭ್ಯವಿರುವ ಸೀಟುಗಳಿಗಿಂತ ಕಡಿಮೆ ಸಂಖ್ಯೆಯ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುವ ಕಾರಣ ಎಂ.ಇ/ಎಂ.ಟೆಕ್‌ನ (M.E/M.Tech) ಈ ಕೆಳಗಿನ ಐದು ಕೋರ್ಸ್‌ಗಳಿಗೆ ಪಿಜಿಸಿಇಟಿ-25 (PGCET-25) ನಡೆಸದಿರಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತೀರ್ಮಾನಿಸಿದೆ.
ಬಯೊ- ಟೆಕ್ನಾಲಜಿ, ಕೆಮಿಕಲ್ ಎಂಜಿನಿಯರಿಂಗ್, ಎನ್ವಿರಾನ್ಮೆಂಟ್ ಎಂಜಿನಿಯರಿಂಗ್, ಪಾಲಿಮರ್ ಸೈನ್ಸ್ ಮತ್ತು ಟೆಕ್ಸ್‌ಟೈಲ್ ಟೆಕ್ನಾಲಜಿ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗೆ ಲಭ್ಯವಿರುವ ಸೀಟುಗಳಿಗಿಂತ ಕಡಿಮೆ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಹೀಗಾಗಿ ಅರ್ಹದಾಯಕ ಪದವಿ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಿ, ಪ್ರಕಟಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್, ಚೀನಾಗೆ ಟಕ್ಕರ್ ಕೊಡಲು ಹೊಸ ಫೈಟರ್ ಜೆಟ್‌ಗೆ ಭಾರತ ಅನುಮೋದನೆ
ಈ ಮೇಲಿನ ಕೋರ್ಸ್‌ಗಳನ್ನು ಹೊರತುಪಡಿಸಿ, ಸಿವಿಲ್ ಎಂಜಿನಿಯರಿಂಗ್, ಮೆಕಾನಿಕಲ್ ಸೈನ್ಸ್ ಮತ್ತು ಎಲೆಕ್ಟ್ರಿಕಲ್ ಸೈನ್ಸ್ ವಿಷಯಗಳಿಗೆ ಇದೇ 31ರಂದು ವೇಳಾಪಟ್ಟಿ ಪ್ರಕಾರ ಪರೀಕ್ಷೆ ನಡೆಯಲಿದೆ. ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಜೂನ್ 2ರಂದು ನಡೆಸಲಾಗುವುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಜ್ಯೋತಿ ಮಲ್ಹೋತ್ರಾ ಮೊಬೈಲ್, ಲ್ಯಾಪ್‌ಟಾಪ್‌ನಿಂದ 12,000 ಜಿಬಿ ಡಾಟಾ ರಿಟ್ರೀವ್ – ಸ್ಫೋಟಕ ರಹಸ್ಯಗಳು ಬಯಲಿಗೆ!