ಲಕ್ನೋ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆಯುತ್ತಿರುವ ನಿರ್ಣಾಯಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಇಂದಿನ ಪಂದ್ಯದಲ್ಲಿ 2 ಮುಖ್ಯ ಬದಲಾವಣೆಯನ್ನು ಆರ್‌ಸಿಬಿ ಮಾಡಿಕೊಂಡಿದೆ.
ನಿರ್ಣಾಯಕ ಪಂದ್ಯದಲ್ಲಿ ನಾಯಕ ರಜತ್ ಪಾಟೀದಾರ್ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯಲಿದ್ದು, ಜಿತೇಶ್ ಶರ್ಮಾ ತಾತ್ಕಾಲಿಕ ನಾಯಕನಾಗಿ ಕಣಕ್ಕಿಳಿಯುತ್ತಿದ್ದಾರೆ. ಅಲ್ಲದೇ ದೈತ್ಯ ಬ್ಯಾಟರ್ ಟಿಮ್ ಡೇವಿಡ್ ಹಾಗೂ ಲುಂಗಿ ಎನ್‌ಗಿಡಿ ಅವರನ್ನ ಕೈಬಿಟ್ಟಿದ್ದು ಅವರ ಬದಲಿಗೆ ಲಿಯಾಮ್ ಲಿವಿಂಗ್‌ಸ್ಟೋನ್ ಹಾಗೂ ನುವಾನ್ ತುಷಾರ ಅವರನ್ನು ಕಣಕ್ಕಿಳಿಸುತ್ತಿದೆ. ಹೀಗಾಗಿ ಇಂದಿನ ಪಂದ್ಯದ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.
ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಟಿಮ್ ಡೇವಿಡ್ ಕಾಲಿಗೆ ಪೆಟ್ಟು ಮಾಡಿಕೊಂಡು ಅರ್ಧಕ್ಕೆ ಹೊರನಡೆದಿದ್ದರು. ಆ ಪಂದ್ಯದಲ್ಲಿ ಬ್ಯಾಟಿಂಗ್‌ಗೆ ಇಳಿದರೂ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಸದ್ಯ ಇದೀಗ ಗಾಯದ ಸಮಸ್ಯೆಯಿಂದಾಗಿ ಅವರು ಹೊರಗುಳಿದಿದ್ದಾರೆ ಎಂದು ಹೇಳಲಾಗುತ್ತಿದೆ.
ಆರ್‌ಸಿಬಿ – ಪ್ಲೇಯಿಂಗ್-11
ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ಮಯಾಂಕ್ ಅಗರ್ವಾಲ್, ಸೂಯಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ನಾಯಕ), ರೊಮಾರಿಯೊ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಳ್, ನುವಾನ್ ತುಶಾರಾ.
ಲಕ್ನೋ ಪ್ಲೇಯಿಂಗ್-11
ಮಿಚೆಲ್ ಮಾರ್ಷ್, ನಿಕೋಲಸ್ ಪೂರನ್, ರಿಷಭ್ ಪಂತ್, ಮ್ಯಾಥ್ಯೂ ಬ್ರೀಟ್ಜ್ಕೆ, ಆಯುಷ್ ಬದೋನಿ, ಅಬ್ದುಲ್ ಸಮದ್, ಹಿಮ್ಮತ್ ಸಿಂಗ್, ಶಹಬಾಜ್ ಅಹ್ಮದ್, ದಿಗ್ವೇಶ್ ರಾಥಿ, ಅವೇಶ್ ಖಾನ್, ವಿಲ್ ಒ ರೂರ್ಕಿ.
4 ತಂಡಗಳು ಪ್ಲೇ ಆಫ್‌ಗೆ
ಸೋಮವಾರ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿರುವ ಪಂಜಾಬ್ ಕಿಂಗ್ಸ್ ಕ್ವಾಲಿಫೈಯರ್-1ಕ್ಕೆ ಅರ್ಹತೆ ಪಡೆದಿದೆ. ಇನ್ನು ಮುಂಬೈ ಎಲಿಮಿನೇಟರ್‌ನಲ್ಲಿ ಪಂದ್ಯವನ್ನಾಡಲಿದೆ. ಇಂದು (ಮಂಗಳವಾರ) ಆರ್‌ಸಿಬಿ ಹಾಗೂ ಲಕ್ನೋ ನಡುವಣ ಲೀಗ್ ಹಂತದ ಕೊನೆಯ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ಗೆದ್ದರೆ ಪಂಜಾಬ್ ವಿರುದ್ಧ ಕ್ವಾಲಿಫೈಯರ್ 1ನಲ್ಲಿ ಪಂಜಾಬ್ ವಿರುದ್ಧ ಸೆಣಸಲಿದೆ. ಇಲ್ಲವೇ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ವಿರುದ್ಧ ಆಡಲಿದೆ.