ಸಿಎಕ್ಸ್‌ಒ ಸಮಾವೇಶ; ಹಳೆ ವಿದ್ಯಾರ್ಥಿಗಳ ಸಭೆಯಲ್ಲಿ ಸಚಿವರ ಘೋಷಣೆ
ಬೆಂಗಳೂರು: ಗ್ರಾಮೀಣ ಯುವ ಸಮೂಹವನ್ನು ಸಬಲೀಕರಣಗೊಳಿಸಲು, ನಾವೀನ್ಯತೆ, ಸಮಾನತೆ ಮತ್ತು ಅಂತರ್ಗತ ಅಭಿವೃದ್ಧಿಗೆ ಮಾದರಿಯಾಗಿ ಉಳಿಯುವ ಭವಿಷ್ಯವನ್ನು ರೂಪಿಸಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ ಎಂದು ಸಚಿವ ಡಾ. ಶರಣಪ್ರಕಾಶ್ ಪಾಟೀಲ್ (Sharanprakash Patil) ತಿಳಿಸಿದರು.
ಬೆಂಗಳೂರಿನ ರಾಡಿಸನ್ ಬ್ಲೂನಲ್ಲಿ ನಡೆದ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಾ (DDU-GKY) CXO ಸಮಾವೇಶ ಮತ್ತು ಹಳೆಯ ವಿದ್ಯಾರ್ಥಿಗಳ ಸಭೆಯನ್ನು ಉದ್ದೇಶಿಸಿ ಸಚಿವರು ಮಾತನಾಡಿದರು. ಇದನ್ನೂ ಓದಿ: PGCET: ಐದು ಎಂಟೆಕ್ ಕೋರ್ಸ್‌ಗಳಿಗೆ ಪ್ರವೇಶ ಪರೀಕ್ಷೆ ಇಲ್ಲ- ಕೆಇಎ
CXO ಸಮಾವೇಶ ಮತ್ತು ಹಳೆಯ ವಿದ್ಯಾರ್ಥಿಗಳ ಸಭೆಯು ಸಹಯೋಗದ ಕ್ರಮ, ನಾವೀನ್ಯತೆ ಮತ್ತು ಬದ್ಧತೆಯ ಮೂಲಕ ಕರ್ನಾಟಕದ ಭವಿಷ್ಯವನ್ನು ರೂಪಿಸುವ ಪ್ರಮುಖ ಅವಕಾಶ ಕಲ್ಪಿಸುವ ವೇದಿಕೆಯಾಗಿದೆ ಎಂದರು.
ನಮ್ಮ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಮೂಲಕ ಗ್ರಾಮೀಣ ಯುವಕರನ್ನು ಸಬಲೀಕರಣಗೊಳಿಸುವ ಪರಿವರ್ತನಾತ್ಮಕ ಹಾದಿಯಲ್ಲಿದೆ. ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ (DDU-GKY) ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಒಂದು ಮೂಲಾಧಾರ ಮತ್ತು ಪ್ರಮುಖ ಉಪಕ್ರಮವಾಗಿದೆ. ಈ ಕಾರ್ಯಕ್ರಮವು ಗ್ರಾಮೀಣ ಯುವಜನರಿಗೆ ಜೀವನಾಡಿಯಾಗಿ ಹೊರಹೊಮ್ಮಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಅರಣ್ಯ ಇಲಾಖೆ ರಾಯಭಾರಿಯಾಗಿ ಅನಿಲ್ ಕುಂಬ್ಳೆ: ಈಶ್ವರ್ ಖಂಡ್ರೆ
ಉದ್ಯಮ-ಸಂಬಂಧಿತ ಕೌಶಲ್ಯ ತರಬೇತಿಯನ್ನು ನೀಡುವ ಮೂಲಕ, ಯುವಕರು ಅರ್ಥಪೂರ್ಣ ಉದ್ಯೋಗವನ್ನು ಪಡೆಯಲು ಅನುವು ಮಾಡಿಕೊಡುತ್ತದೆ. ಇದರಿಂದಾಗಿ ಅವರ ಜೀವನಮಟ್ಟ ಸುಧಾರಿಸುತ್ತದೆ ಮತ್ತು ಗ್ರಾಮೀಣ ಬಡತನವನ್ನು ನಿರ್ಮೂಲನೆ ಮಾಡಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ನಮ್ಮ ಸರ್ಕಾರ ಸಮಗ್ರ ಬೆಳವಣಿಗೆಯನ್ನು ಉತ್ತೇಜಿಸಲು, ಸುಸ್ಥಿರ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಮತ್ತು ನಮ್ಮ ಹಳ್ಳಿಗಳಲ್ಲಿ ಆರ್ಥಿಕ ಸದೃಢತೆ ನಿರ್ಮಿಸುವ ಗುರಿ ಹೊಂದಿದೆ. ನಾವು ಕೇವಲ ಜೀವನೋಪಾಯ ನಿರ್ಮಿಸುತ್ತಿಲ್ಲ. ಕರ್ನಾಟಕಕ್ಕೆ ಉಜ್ವಲ, ಸಮಾನ ಭವಿಷ್ಯವನ್ನು ರೂಪಿಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.
ನಮ್ಮ ಸರ್ಕಾರದ ಮತ್ತೊಂದು ಮಹತ್ವದ ಹೆಜ್ಜೆ ಯುವನಿಧಿ. ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮಾ ಹೊಂದಿರುವವರಿಗೆ ಆರ್ಥಿಕ ನೆರವು ನೀಡುವ ಯೋಜನೆ ಸಾವಿರಾರು ಮಂದಿಗೆ ಅನುಕೂಲವಾಗಿದೆ. ಯುವನಿಧಿ ಫಲಾನುಭವಿಗಳಿಗೆ ತರಬೇತಿ ನೀಡುವುದು ನಮ್ಮ ಪ್ರಾಥಮಿಕ ಆದ್ಯತೆಯಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಮಾಜದಲ್ಲಿ ಅಶಾಂತಿ, ಒಡಕು ಮೂಡಿಸೋದು ಬಿಜೆಪಿ ಉದ್ದೇಶ: ಶರಣಪ್ರಕಾಶ್ ಪಾಟೀಲ್
ಸರ್ಕಾರ ಮತ್ತು ಖಾಸಗಿ ಪಾಲುದಾರಿಕೆಯಲ್ಲಿ ಹೊಸ ಅನ್ವೇಷಣೆ ಮಾಡೋಣ. ಮಹತ್ವಾಕಾಂಕ್ಷೆಯನ್ನು ಪೋಷಿಸೋಣ ಮತ್ತು ಕರ್ನಾಟಕದ ನಿಜವಾದ ಚೈತನ್ಯವನ್ನು ಪ್ರತಿಬಿಂಬಿಸುವ ಭವಿಷ್ಯವನ್ನು ರೂಪಿಸೋಣ ಎಂದು ಕರೆ ನೀಡಿದರು.