ಬಹುಕಾಲದ ಗೆಳತಿ ಝೈನಾಬ್ (Jainab (Ravdjee) ಜೊತೆ ಅಖಿಲ್ ಜೂನ್ 6ರಂದು ಹಸೆಮಣೆ ಏರಲಿದ್ದಾರೆ ಎನ್ನಲಾಗಿದೆ. ಹೈದರಾಬಾದ್‌ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಮದುವೆ ನಡೆಯಲಿದೆ ಎಂದು ವರದಿ ಆಗಿದೆ. ಬಳಿಕ ರಾಜಸ್ಥಾನದಲ್ಲಿ ಅದ್ಧೂರಿಯಾಗಿ ಮದುವೆ ಆರತಕ್ಷತೆ ಕಾಯಕ್ರಮ ಜರುಗಲಿದೆ ಎನ್ನಲಾಗಿದೆ. ಈ ಬಗ್ಗೆ ಅಕ್ಕಿನೇನಿ ಕುಟುಂಬದಿಂದ ಅಧಿಕೃತ ಮಾಹಿತಿ ಘೋಷಿಸಬೇಕಿದೆ. ಇದನ್ನೂ ಓದಿ:ಹೃತಿಕ್ ರೋಷನ್ ಜೊತೆ ಸಿನಿಮಾ- ‘ಹೊಂಬಾಳೆ ಫಿಲಂಸ್’ನಿಂದ ಗುಡ್ ನ್ಯೂಸ್
ಝೈನಾಬ್ ರಾವಡ್ಜಿ ಅವರನ್ನು ಅಖಿಲ್ 2 ವರ್ಷಗಳಿಂದ ಪ್ರೀತಿಸುತ್ತಿದ್ದರು. ಕಳೆದ ವರ್ಷ ನವೆಂಬರ್‌ನಲ್ಲಿ ಎಂಗೇಜ್‌ಮೆಂಟ್ ಮಾಡಿಕೊಂಡರು. ಈ ಬಗ್ಗೆ ಸ್ವತಃ ನಾಗಾರ್ಜುನ ರಿವೀಲ್ ಮಾಡಿದ್ದರು.