ದಕ್ಷಿಣ ಕನ್ನಡದಲ್ಲಿ ಗುಡ್ಡ ಕುಸಿತ, ಪ್ರಾಣಹಾನಿ – ರಕ್ಷಣಾ ಕಾರ್ಯಕ್ಕೆ ಯು.ಟಿ ಖಾದರ್ ಸೂಚನೆ

Public TV
3 Min Read
Mangaluru UT Khader

– ಎಲ್ಲ ಕಾರ್ಯಕ್ರಮ ಮೊಟಕುಗೊಳಿಸಿ ಮಂಗಳೂರಿಗೆ ತೆರಳಿದ ದಿನೇಶ್ ಗುಂಡೂರಾವ್

ಮಂಗಳೂರು\ಬೆಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ವಿಪರೀತ ಮಳೆಯಿಂದಾಗಿ ಉಳ್ಳಾಲ ತಾಲೂಕಿನ ವಿವಿಧೆಡೆ ಗುಡ್ಡ ಕುಸಿತದಿಂದಾಗಿ ಪ್ರಾಣ ಹಾನಿ ಸಂಭವಿಸಿದೆ. ಮದೀನದಿಂದ ಮಾಹಿತಿ ಪಡೆದಿರುವ ವಿಧಾನಸಭಾ ಸಭಾಧ್ಯಕ್ಷ ಯು.ಟಿ ಖಾದರ್ (U T Khader), ಮುಂಜಾಗ್ರತಾ ಹಾಗೂ ರಕ್ಷಣಾ ಕಾರ್ಯಾಚರಣೆಗಾಗಿ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

mangaluru Rain Death

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉಳ್ಳಾಲ (Ullal) ತಾಲೂಕಿನ ಬೆಳ್ಮ ಹಾಗೂ ಮಂಜನಾಡಿ ಗ್ರಾಮದಲ್ಲಿ ಗುಡ್ಡ ಕುಸಿದು ಪ್ರಾಣ ಹಾನಿ ಸಂಭವಿಸಿದೆ. ಅಲ್ಲದೇ ಉಳ್ಳಾಲ ನಗರಸಭೆ ವ್ಯಾಪ್ತಿಯ ಉಳ್ಳಾಲ ಬೈಲು, ಅಕ್ಕರೆಕೆರೆ, ಮಿಲ್ಲತ್ ನಗರ, ಉಳಿಯ, ಅಲೇಕಳ, ಸುಂದರಿಬಾಗ್, ಕಲ್ಲಾಪು, ಸೋಮೇಶ್ವರ, ಕೋಟೆಕಾರು ವ್ಯಾಪ್ತಿಯ ಕುಂಪಲ, ಕನೀರ್ ತೋಟ, ಉಚ್ಚಿಲ ಮುಂತಾದ ನದಿ ತಗ್ಗು ಪ್ರದೇಶಗಳಿಗೆ ಕೃತಕ ನೆರೆಯಿಂದ ಮನೆಗಳಿಗೆ ನೀರು ನುಗ್ಗಿ ಆಸ್ತಿ-ಪಾಸ್ತಿಗಳಿಗೆ ನಷ್ಟ ಉಂಟಾಗಿದೆ. ಈ ಸಲುವಾಗಿ ಮುಂಜಾಗ್ರತಾ ಕ್ರಮ ಹಾಗೂ ಅಗತ್ಯ ರಕ್ಷಣಾ ಕಾರ್ಯದ ಕುರಿತಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಎನ್‌ಡಿಆರ್‌ಎಫ್ ಮುಂತಾದ ರಕ್ಷಣಾ ತಂಡಗಳನ್ನು ಸನ್ನದ್ಧಗೊಳಿಸಲು ಸೂಚನೆ ನೀಡಿದ್ದೇನೆ ಎಂದು ಸಭಾಧ್ಯಕ್ಷ ಯು.ಟಿ ಖಾದರ್ ತಿಳಿಸಿದ್ದಾರೆ. ಇದನ್ನೂ ಓದಿ: ದ.ಕನ್ನಡ | ಭಾರೀ ಮಳೆಗೆ ಗುಡ್ಡ, ಮನೆ ಕುಸಿತ – ಬಾಲಕಿ ಸೇರಿ ಇಬ್ಬರು ಸಾವು

ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಕಂದಾಯ ಸಚಿವರ ಜೊತೆಯಲ್ಲಿ ಕೂಡಾ ಮಾತುಕತೆ ನಡೆಸಿ ಮುಖ್ಯಮಂತ್ರಿಗಳ ಗಮನಕ್ಕೂ ಕೂಡಾ ತರಲಾಗಿದೆ. ಮೃತರ ಕುಟುಂಬಗಳಿಗೆ ಪರಿಹಾರ ಹಾಗೂ ಆಸ್ತಿ-ಪಾಸ್ತಿ ನಷ್ಟ ಸಂಭವಿಸಿದರ ವರದಿ ಆಧರಿಸಿ ಪರಿಹಾರ ನೀಡಿ ದಕ್ಷಿಣ ಕನ್ನಡ ಜಿಲ್ಲೆಗೆ ವಿಶೇಷ ಅಧಿಕಾರಿಯನ್ನು ನೇಮಿಸಿ ಪರಿಸ್ಥಿತಿಯ ಅವಲೋಕನ ನಡೆಸಲು ಸೂಚನೆ ನೀಡಲಾಗಿದೆಯೆಂದು ಹೇಳಿದ್ದಾರೆ. ಇದನ್ನೂ ಓದಿ: ನಾವು ಕೈಕಟ್ಟಿ ಕೂರಲ್ಲ, ದಕ್ಷಿಣ ಕನ್ನಡ ಜಿಲ್ಲೆ ಶಾಂತಿಯಿಂದಿರಬೇಕು ಅಷ್ಟೇ: ಪರಮೇಶ್ವರ್

ಮದೀನಾದಿಂದಲೇ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿರುವ ಸ್ಪೀಕರ್
ಕ್ಷೇತ್ರದ ಪ್ರತೀ ಗ್ರಾಮ ಪಂಚಾಯತಿ ಹಾಗೂ ಸ್ಥಳೀಯ ಪಂಚಾಯತಿ ಪ್ರತಿನಿಧಿಗಳ ಜೊತೆ ನಿರಂತರ ಸಂಪರ್ಕದಲ್ಲಿರುವ ಯು.ಟಿ ಖಾದರ್ ಕ್ಷಣ ಕ್ಷಣದ ಮಾಹಿತಿಯನ್ನು ಪಡೆದುಕೊಂಡು ರಕ್ಷಣಾ ಕಾರ್ಯಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಅದಾಗ್ಯೂ ಸಾರ್ವಜನಿಕರು ಅಗತ್ಯ ಬಿದ್ದಲ್ಲಿ ಈ ಕೆಳಗೆ ನೀಡಲಾಗಿರುವ ನನ್ನ ದೂರವಾಣಿ ಸಂಖ್ಯೆಯನ್ನು ಸಂಪರ್ಕ ಮಾಡಬಹುದು ಎಂದಿದ್ದಾರೆ. ಇದನ್ನೂ ಓದಿ: ಮಂಡ್ಯ ಬಾಲಕಿ ಸಾವು ಕೇಸ್ | ಎಚ್ಚೆತ್ತ ಬೆಂಗಳೂರು ಪೊಲೀಸರಿಂದ ಹೊಸ ಎಸ್‌ಒಪಿ ಜಾರಿ

ತಾಲೂಕಿನ ಬೆಳ್ಮ ಗ್ರಾಮದ ಕಾನಕರೆಯಲ್ಲಿರುವ ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದು ಬಿದ್ದು ನೌಶಾದ್‌ರ ಪುತ್ರಿ ಫಾತಿಮ ನಈಮ (10), ಮಂಜನಾಡಿ ಗ್ರಾಮದ ಮೊಂಟೆ ಪದವು ಸಮೀಪದ ಕೋಡಿ ಎಂಬಲ್ಲಿ ಗುಡ್ಡ ಜರಿದು ಐವರು ಮಣ್ಣಿನಡಿಯಲ್ಲಿ ಸಿಲುಕಿ ಪ್ರೇಮ ಪೂಜಾರಿರವರು ಮೃತರಾಗಿದ್ದು, ಇತರರ ರಕ್ಷಣಾ ಕಾರ್ಯ ಮುಂದುವರಿದಿದೆ. ಸ್ಥಳದಲ್ಲಿ ಅಪರ ಜಿಲ್ಲಾಧಿಕಾರಿ ತಹಶೀಲ್ದಾರ್ ಹಾಗೂ ಇತರ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ.

ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ, ಸಾರ್ವಜನಿಕರ ಸಂಪರ್ಕದಲ್ಲಿದ್ದುಕೊಂಡು ಸಹಕರಿಸುವಂತೆ ಯು.ಟಿ ಖಾದರ್ ಸೂಚನೆ ನೀಡಿದ್ದಾರೆ. ಅಲ್ಲದೇ ಜನ ಸಾಮಾನ್ಯರು ಕೂಡಾ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ನ್ಯೂಯಾರ್ಕ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಅಣ್ಣಾವ್ರ ಮೊಮ್ಮಕ್ಕಳು

ಮಂಗಳೂರಿಗೆ ತೆರಳಿದ ದಿನೇಶ್ ಗುಂಡೂರಾವ್
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ (Dinesh Gundu Rao) ಅವರು, ಬೆಂಗಳೂರಿನಲ್ಲಿ ನಿಗದಿಯಾಗಿದ್ದ ಎಲ್ಲ ಕಾರ್ಯಕ್ರಮಗಳನ್ನ ಮೊಟಕುಗೊಳಿಸಿ ಇಂದು ಮಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ಇಂದು ಸಂಜೆ ವೇಳೆಗೆ ಮಂಗಳೂರು ತಲುಪಲಿರುವ ಸಚಿವರು, ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಲಿದ್ದಾರೆ. ಇದನ್ನೂ ಓದಿ: ಹೃತಿಕ್ ರೋಷನ್‌ಗೆ ಪೃಥ್ವಿರಾಜ್ ಸುಕುಮಾರನ್ ಆ್ಯಕ್ಷನ್ ಕಟ್?

ಭಾರೀ ಮಳೆ ಹಿನ್ನೆಲೆಯಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲು ಈಗಾಗಲೇ ಜಿಲ್ಲಾಡಳಿತಕ್ಕೆ ಸಚಿವರು ಸೂಚನೆ ನೀಡಿದ್ದಾರೆ. ಇಂದು ಮಂಗಳೂರಿನಲ್ಲಿಯೇ ತಂಗಲಿರುವ ಸಚಿವರು, ತ್ವರತಗತಿಯಲ್ಲಿ ವಿಪತ್ತು ನಿರ್ವಹಣಾ ಕ್ರಮಗಳನ್ನು ಕೈಗೊಳ್ಳುವತ್ತ ಸ್ಥಳದಲ್ಲೇ ಇದ್ದು, ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಿದ್ದಾರೆ.

Share This Article