ನಾನು ಬೆದರಿಕೆಗೆ ಹೆದರಲ್ಲ, ಕ್ಷಮೆ ಕೇಳಲ್ಲ- ಕಮಲ್ ಹಾಸನ್ ಉದ್ಧಟತನ

Public TV
1 Min Read
Kamal Haasan

ನ್ನಡ ಭಾಷೆಯ ಬಗ್ಗೆ ಕಮಲ್ ಹಾಸನ್ (Kamal Haasan) ನೀಡಿರುವ ಹೇಳಿಕೆಗೆ ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಕ್ಷಮೆ ಕೋರಲು ಗಡುವು ನೀಡಿದ್ದ ಕರ್ನಾಟಕಕ್ಕೆ ಕ್ಷಮೆ ಕೇಳಲ್ಲ, ನಾನು ತಪ್ಪು ಮಾಡಿಲ್ಲ ಎಂದು ಕಮಲ್ ಹಾಸನ್ ಮತ್ತೆ ಉದ್ಧಟತನ ತೋರಿದ್ದಾರೆ. ಇದನ್ನೂ ಓದಿ:ಮರೆಯಾದ ಭಾವಗೀತೆಗಳ ಭಾವ, ಅಗಲಿದ ಕಾವ್ಯ ಚೇತನ – ಹೆಚ್‌ಎಸ್‌ವಿ ನಿಧನಕ್ಕೆ ಶಿವರಾಜ ತಂಗಡಗಿ ಶೋಕ

kamal haasanಇಂದು (ಮೇ 30) ಚೆನ್ನೈನಲ್ಲಿ ಕಮಲ್ ಹಾಸನ್ ಮಾತನಾಡಿ, ಇದು ಪ್ರಜಾಪ್ರಭುತ್ವ. ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳದ ಮೇಲಿನ ನನ್ನ ಪ್ರೀತಿ ನಿಜ. ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನನ್ನಿಂದ ತಪ್ಪಾಗಿದ್ರೆ ಕ್ಷಮೆ ಕೇಳುವೆ, ನನ್ನಿಂದ ತಪ್ಪು ಆಗಿಲ್ಲ. ನನ್ನ ನಿರ್ಧಾರಕ್ಕೆ ಬದ್ಧವಾಗಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.

Kamal Haasan 1ಯಾವುದೇ ಬೆದರಿಕೆ, ಎಚ್ಚರಿಕೆಗೆ ನಾನು ಹೆದರುವುದಿಲ್ಲ. ಕಾನೂನು ಹಾಗೂ ನ್ಯಾಯದ ಮೇಲೆ ನಂಬಿಕೆ ಇಟ್ಟಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್ ಹಾಸನ್ ಮಾತು ಒಪ್ಪಲ್ಲ- ಜಗ್ಗೇಶ್ ಖಂಡನೆ

KamalHaasanತಮಿಳು ಭಾಷೆಯಿಂದ ಕನ್ನಡ ಹುಟ್ಟಿದ್ದು ಎಂಬ ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ತಮ್ಮ ನಟನೆಯ ‘ಥಗ್ ಲೈಫ್’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಕನ್ನಡದ ಹಿರಿಯ ನಟ ಶಿವರಾಜ್‌ಕುಮಾರ್ ಅವರ ಎದುರೇ ಕಮಲ್ ಹಾಸನ್ ಈ ಹೇಳಿಕೆ ನೀಡಿದ್ದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

Kamal Haasan

ಕಮಲ್ ಹಾಸನ್ ಹೇಳಿಕೆ ಶುದ್ಧ ಸುಳ್ಳು. ಭಾಷಾ ಪ್ರಾವಿಣ್ಯತೆ ಇಲ್ಲದೇ ಈ ರೀತಿಯ ಉದ್ಧಟತನದ ಹೇಳಿಕೆ ನೀಡುವುದು ಸರಿಯಲ್ಲ ಎಂದು ಭಾಷಾ ವಿಜ್ಞಾನಿಗಳು ಖಂಡಿಸಿದ್ದಾರೆ. ನಟನ ಹೇಳಿಕೆಗೆ ಕನ್ನಡಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಕೂಡಲೇ ಕನ್ನಡಿಗರ ಕ್ಷಮೆಯಾಚಿಸಿ, ಇಲ್ಲದಿದ್ದರೆ ನಿಮ್ಮ ಸಿನಿಮಾವನ್ನು ಕರ್ನಾಟಕದಲ್ಲಿ ಬ್ಯಾನ್ ಮಾಡಲಾಗುವುದು ಎಂದು ಹೋರಾಟಗಾರರು ನಟನಿಗೆ ಎಚ್ಚರಿಕೆ ನೀಡಿದ್ದಾರೆ.

Share This Article