ಮಂಗಳೂರಲ್ಲಿ ಕಡಲಬ್ಬರ – ನಾಡದೋಣಿ ಮಗುಚಿ ಇಬ್ಬರು ಮೀನುಗಾರರು ನೀರುಪಾಲು

Public TV
1 Min Read
Mangaluru FisherMan Death

ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಜೊತೆಗೆ ಕಡಲಬ್ಬರವು ಜೋರಾಗಿದೆ. ನಾಡದೋಣಿ (Boat) ಮಗುಚಿ ಇಬ್ಬರು ಮೀನುಗಾರರು ನೀರುಪಾಲಾಗಿದ್ದಾರೆ.

ಮಂಗಳೂರು ಕಡಲತೀರದ ತೋಟಬೆಂಗ್ರೆ ಅಳಿವೆ ಬಾಗಿಲು ಎಂಬಲ್ಲಿ ಈ ಘಟನೆ ನಡೆದಿದೆ. ತೋಟಬೆಂಗ್ರೆ ನಿವಾಸಿಗಳಾದ ಯಶವಂತ, ಕಮಲಾಕ್ಷ ನೀರುಪಾಲಾದ ಮೀನುಗಾರರು (Fishermens). ಇದನ್ನೂ ಓದಿ: ಮಂಗಳೂರಿನಲ್ಲಿ ʻಮರಣ ಮಳೆʼಗೆ ಅಜ್ಜಿ, ಮೊಮ್ಮಕ್ಕಳು ಬಲಿ – 9 ಗಂಟೆಗಳ ಜೀವನ್ಮರಣ ಹೋರಾಟದ ನಂತ್ರ ಬದುಕುಳಿದ ತಾಯಿ!

ಯಶವಂತ ಹಾಗೂ ಕಮಲಾಕ್ಷ ಅವರು ಮೀನುಗಾರಿಕೆಗೆ (Fishing) ತೆರಳಿದ್ದಾಗ ಕಡಲ ಅಲೆಗಳ ಅಬ್ಬರಕ್ಕೆ ನಾಡದೋಣಿ ಪಲ್ಟಿಯಾಗಿದೆ. ನಾಡದೋಣಿ ಪಲ್ಟಿಯಾಗಿ ಇಬ್ಬರು ಮೀನುಗಾರರು ನೀರು ಪಾಲಾಗಿದ್ದಾರೆ. ಇದೀಗ ನಾಡದೋಣಿಯ ಅವಶೇಷಗಳು ಕಡಲತೀರಕ್ಕೆ ಬಂದು ಬಿದ್ದಿದೆ. ನೀರಿನಲ್ಲಿ ಕಣ್ಮರೆಯಾಗಿರುವ ಮೀನುಗಾರರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗರ್ಭಿಣಿಯರೂ ಸೇರಿ 4 ಮಂದಿಗೆ ಕೊರೊನಾ

Share This Article