ಪ್ರಚೋದನಕಾರಿ ಭಾಷಣ – ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಕೇಸ್‌ ದಾಖಲು

Public TV
1 Min Read
Kalladka Prabhakar Bhat

ಮಂಗಳೂರು: ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ (Kalladka Prabhakar Bhat) ವಿರುದ್ಧ ಪ್ರಕರಣ ದಾಖಲಾಗಿದೆ.  

ಬಜ್ಪೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ (Suhas Shetty) ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ 353(2) ಅಡಿಯಲ್ಲಿ ಕೇಸ್‌ ದಾಖಲಾಗಿದೆ. ಇದನ್ನೂ ಓದಿ: ಕೊಹ್ಲಿ ಮಾಲೀಕತ್ವದ ಬೆಂಗ್ಳೂರು ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್

ಮೇ 12 ರಂದು ಬಂಟ್ವಾಳದ ಕಾವಳಪಡೂರು ಮದ್ವ ಪ್ಯಾಲೇಸ್ ಹಾಲ್‌ನಲ್ಲಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಸಮಾಜದ ಸ್ವಾಸ್ತ್ಯ ಕೆಡುವಂತೆ, ಮತೀಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಚಪ್ಪಲಿಯಿಂದ ಹೊಡೆದ ಪ್ರಕರಣ – ಆಟೋ ಚಾಲಕನ ಕಾಲಿಗೆ ಬಿದ್ದು ಕ್ಷಮೆ ಕೇಳಿದ ದಂಪತಿ

 

Share This Article