ಅಸ್ಸಾಂನಲ್ಲಿ ಭೀಕರ ಪ್ರವಾಹ – ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾಗೆ ಮೋದಿ ಕರೆ

Public TV
1 Min Read
Narendra Modi

– ಕೇಂದ್ರ ಸರ್ಕಾರದಿಂದ ಸಂಪೂರ್ಣ ನೆರವು ಭರವಸೆ ನೀಡಿದ ಪ್ರಧಾನಿ

ಗುವಾಹಟಿ: ಅಸ್ಸಾಂನಲ್ಲಿ ಭೀಕರ ಮಳೆ ಹಾಗೂ ಪ್ರವಾಹ (Assam Flood) ಉಂಟಾದ ಪರಿಣಾಮ 38 ಮಂದಿ ಸಾವನ್ನಪ್ಪಿದ್ದು, ಸುಮಾರು 5 ಲಕ್ಷಕ್ಕೂ ಅಧಿಕ ಮಂದಿ ಅತ್ರಂತ್ರಗೊಂಡಿದ್ದಾರೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ (Narendra Modi), ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಕರೆ ಮಾಡಿ ಅಲ್ಲಿನ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದಿದ್ದಾರೆ.

ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ದೂರವಾಣಿ ಕರೆ ಮೂಲಕ ಮೋದಿಗೆ ಅಸ್ಸಾಂನ ಪ್ರವಾಹ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ಈ ವೇಳೆ ಮೋದಿ, ಕೇಂದ್ರ ಸರ್ಕಾರ ಸಂಪೂರ್ಣ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಕುರಿತು ಶರ್ಮಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ತಾಕತ್ತಿದ್ರೆ ಅರುಣ್ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ – ಸರ್ಕಾರ, ಪೊಲೀಸರಿಗೆ ಯುವಕನ ಸವಾಲು

Assam Flood

ಎಕ್ಸ್‌ನಲ್ಲಿ ಏನಿದೆ?
ಸ್ವಲ್ಪ ಸಮಯದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅಸ್ಸಾಂನಲ್ಲಿನ ಪ್ರವಾಹ ಪರಿಸ್ಥಿತಿಯನ್ನು ವಿಚಾರಿಸಲು ನನಗೆ ಕರೆ ಮಾಡಿದ್ದರು. ಅಸ್ಸಾಂ ಮತ್ತು ಪಕ್ಕದ ರಾಜ್ಯಗಳಲ್ಲಿ ನಿರಂತರ ಮಳೆಯಿಂದಾಗಿ ಪ್ರವಾಹ ಉಂಟಾಗಿ ಅನೇಕ ಜನರ ಜೀವನ ಹೇಗೆ ಪರಿಣಾಮ ಬೀರಿದೆ ಎಂಬುದರ ಕುರಿತು ನಾನು ಅವರಿಗೆ ವಿವರಿಸಿದೆ. ಅಲ್ಲದೇ ರಾಜ್ಯ ಸರ್ಕಾರ ಕೈಗೊಂಡಿರುವ ಪರಿಹಾರ ಕಾರ್ಯಾಚರಣೆಯ ಬಗ್ಗೆಯೂ ತಿಳಿಸಿದ್ದೇನೆ. ಇದನ್ನೂ ಓದಿ: RCB ಇಂಪ್ಯಾಕ್ಟ್ ಪ್ಲೇಯರ್ ಆಗಿ ಸಿಂಧನೂರಿನ ಮನೋಜ್ ಬಾಂಡಗೆ – ಕುಟುಂಬಸ್ಥರಿಂದ ಗೆಲುವಿನ ಶುಭಹಾರೈಕೆ

ಪ್ರಧಾನ ಮಂತ್ರಿಗಳು ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳಿಗೆ ಕೇಂದ್ರ ಸರ್ಕಾರದಿಂದ ಸಂಪೂರ್ಣ ಬೆಂಬಲ ನೀಡುವ ಭರವಸೆ ಕೊಟ್ಟಿದ್ದಾರೆ. ಅಸ್ಸಾಂ ಜನರಿಗೆ ಅವರ ಮಾರ್ಗದರ್ಶನ ಮತ್ತು ಅಚಲ ಬೆಂಬಲಕ್ಕಾಗಿ ಕೃತಜ್ಞರಾಗಿರುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ವಿಜಯಪುರ| ದರ ಕುಸಿತ – ರಾಷ್ಟ್ರೀಯ ಹೆದ್ದಾರಿಗೆ ಈರುಳ್ಳಿ ಸುರಿದು ಹೊರಳಾಡಿದ ರೈತ

Share This Article