ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಕಾಲ್ತುಳಿತದಿಂದ ಆದ ಅಪಾರ ಸಾವು-ನೋವಿಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ಕಿಡಿಕಾರಿದ್ದಾರೆ.
ಆರ್‌ಸಿಬಿ ಅಭಿಮಾನಿಗಳ ದುರಂತ ಸಾವಿನ ಕುರಿತು ಮಾತನಾಡಿದ ವಿಜಯೇಂದ್ರ, ಇದು ರಾಜ್ಯ ಸರ್ಕಾರದ ನಿರ್ಲಕ್ಷ್ಯ. ಯಾವುದೇ ತಯಾರಿ ಮಾಡಿಕೊಳ್ಳದೇ ಈ ಕಾರ್ಯಕ್ರಮ ಮಾಡಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ವಿಜಯೋತ್ಸವದ ವೇಳೆ ಯಡವಟ್ಟು – ಕಾಲ್ತುಳಿತಕ್ಕೆ 10 ಆರ್‌ಸಿಬಿ ಫ್ಯಾನ್ಸ್ ದುರ್ಮರಣ

ಪೊಲೀಸರ ಅನುಮತಿ ಇರಲಿಲ್ಲ. ಆದರೂ ಮುಖ್ಯಮಂತ್ರಿಗಳು ಒತ್ತಾಯ ಮಾಡಿ ಕಾರ್ಯಕ್ರಮ ಮಾಡಿದ್ದಾರೆ. ಹೆಣ್ಣುಮಕ್ಕಳಿಗೆ ಯಾವುದೇ ಭದ್ರತೆ ಇರಲಿಲ್ಲ. ಅಧಿಕಾರಿಗಳ ಮಕ್ಕಳು, ಅಧಿಕಾರಿಗಳು ಸೆಲ್ಫಿ ತಗೊಂಡು ಈ ರೀತಿ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಪ್ರಚಾರದ ಹುಚ್ಚಿಗೆ ಜನ ಬಲಿಯಾಗಿದ್ದಾರೆ. ಅಲ್ಲಿ ಯಾವುದೇ ಸೂಕ್ತ ವ್ಯವಸ್ಥೆ ಮಾಡಿಕೊಂಡಿರಲಿಲ್ಲ. ನ್ಯಾಯಾಂಗ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಹನ್ನೊಂದಕ್ಕೂ ಹೆಚ್ಚು ಜನ ಸಾವು, ನೂರಾರು ಜನ ಚಿಕಿತ್ಸೆ ಪಡಿದ್ದಾರೆ. ಬೌರಿಂಗ್‌ನಲ್ಲಿ ಆರು ಮಂದಿ ಸತ್ಗಿದ್ದಾರೆ. ವೈದೇಹಿಯಲ್ಲಿ ನಾಲ್ಕು ಅಂತಿದ್ದಾರೆ. ಇನ್ನೂ ಹಲವರು ಗಾಯಗೊಂಡಿದ್ದಾರೆ. ರಾಜ್ಯ ಸರ್ಕಾರ ಯಾಕೆ ಆತುರ ಪಟ್ಟಿತು. ಇದಕ್ಕೆ ನೇರ ಕಾರಣ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: Namma Bengaluru Scenes – ಆರ್‌ಸಿಬಿ ಅಭಿಮಾನಿಗಳ ಸಂತಸದ ಕ್ಷಣ ಹಂಚಿಕೊಂಡ ಅನುಷ್ಕಾ ಶರ್ಮಾ












