ಮಂಗಳೂರು: ಪತ್ತೂರು ನಗರಸಭಾ ಸದಸ್ಯ ರಮೇಶ್ ರೈ ಮೃತದೇಹ ಪಾಣೆಮಂಗಳೂರಿನ ಸೇತುವೆ ಬಳಿಯ ನೀರಿನ ಟ್ಯಾಂಕಿಯಲ್ಲಿ ಪತ್ತೆಯಾಗಿದೆ.
ರಮೇಶ್ ರೈ ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಈಗ ಪಾಣೆಮಂಗಳೂರಿನ ಸೇತುವೆ ಬಳಿಯ ನೀರಿನ ಟ್ಯಾಂಕಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಇವರು ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು.
ಪಾಣಿಮಂಗಳೂರು ಸೇತುವೆಯ ಬಳಿ ಮೊಬೈಲ್ ಮತ್ತು ಬೈಕ್ ಪತ್ತೆಯಾಗಿತ್ತು. ಅಗ್ನಿಶಾಮಕದಳ, ಪೋಲೀಸ್ ಮತ್ತು ಸ್ಥಳೀಯರಿಂದ ಹುಡುಕಾಟ ನಡೆಸಿದ್ದರು.