ಬೆಂಗಳೂರು: ಜಾರಿ ನಿರ್ದೇಶನಾಲಯ (ED) ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (MUDA) ಸೇರಿದ 100 ಕೋಟಿ ರೂ. ಮೌಲ್ಯದ 92 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಲ್ಲಿ (PMLA) ಪ್ರಕರಣ ದಾಖಲಿಸಿ ತನಿಖೆ ನಡೆಸಿ ಮಾರುಕಟ್ಟೆ ಮೌಲ್ಯದ ಅಂದಾಜು 100 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಲಾಗಿದೆ ಎಂದು ಇಡಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಇಡಿ ಹೇಳಿಕೆಯಲ್ಲಿ ಏನಿದೆ?
ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನು ವಸತಿ ಸಹಕಾರಿ ಸಂಘ ಮತ್ತು ಮುಡಾ ಅಧಿಕಾರಿಗಳು ಸೇರಿದಂತೆ ಪ್ರಭಾವಿ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿತ್ತು. ಇದನ್ನೂ ಓದಿ: ಅಡ್ಡವಾಗಿ ಕಾಲುಗಳು, ಮೂಲೆಯಲ್ಲಿ ತಲೆ – ಸೂಟ್‌ಕೇಸ್‌ನಲ್ಲಿ ಮಹಿಳೆಯ ಮೃತದೇಹ ಪತ್ತೆ
ವಿವಿಧ ಕಾನೂನುಗಳು ಮತ್ತು ಸರ್ಕಾರಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಮುಡಾ ಸೈಟ್‌ಗಳ ಹಂಚಿಕೆ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. .ಇದನ್ನೂ ಓದಿ: ಆನೇಕಲ್ | ಆಟವಾಡ್ತಿದ್ದಾಗ ಕರೆಂಟ್ ಶಾಕ್ ತಗುಲಿ 11 ವರ್ಷದ ಬಾಲಕಿ ಸಾವು
ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಮತ್ತು ಇತರರು ಸೇರಿಕೊಂಡು ಅರ್ನಹ ವ್ಯಕ್ತಿಗಳಿಗೆ ನಿವೇಶನ ಹಂಚಿಕೆ ಮಾಡಿದ್ದಾರೆ. ಅಕ್ರಮವಾಗಿ ಹಂಚಿಕೆ ಮಾಡಲು ನಗದು, ಚರ/ಸ್ಥಿರ ಆಸ್ತಿಗಳ ರೂಪದಲ್ಲಿ ಲಂಚ ಪಡೆದಿದ್ದಕ್ಕೆ ಸಾಕ್ಷ್ಯಗಳು ಲಭ್ಯವಾಗಿದೆ.
ಅಕ್ರಮ ಹಂಚಿಕೆಗಳನ್ನು ಮಾಡಲು ಮುಡಾ ಸಹಕಾರಿ ಸಂಘದ ಅಧಿಕಾರಿಗಳ ಸಂಬಂಧಿಕರು ಸಹವರ್ತಿಗಳ ಬ್ಯಾಂಕ್ ಖಾತೆಗಳ ಮೂಲಕ ಹಣವನ್ನು ರವಾನೆ ಮಾಡಲಾಗಿದೆ
ಈ ಹಿಂದೆ 300 ಕೋಟಿ ರೂ. ಮೌಲ್ಯ 160 ಮುಡಾ ನಿವೇಶನಗಳನ್ನು ಮುಟ್ಟುಗೋಲು ಹಾಕಲಾಗಿತ್ತು. ಇಲ್ಲಿಯವರೆಗೆ ಒಟ್ಟು 400 ಕೋಟಿ ರೂ. ಮೌಲ್ಯದ ಮುಡಾ ನಿವೇಶನಗಳನ್ನು ಮುಟ್ಟುಗೋಲು ಹಾಕಲಾಗಿದೆ.