-ಕುಂಭಮೇಳದಲ್ಲಿ ಕಾಲ್ತುಳಿತ ನಡೆದಿದ್ದಕ್ಕೆ ಅಲ್ಲಿನ ಸಿಎಂ ಜವಾಬ್ದಾರರಲ್ಲವೇ?
ನವದೆಹಲಿ: ಚಿನ್ನಸ್ವಾಮಿ ಕಾಲ್ತುಳಿತ (Chinnaswamy Stampede) ಪ್ರಕರಣದ ಬಗ್ಗೆ ಚರ್ಚಿಸಿ, ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ವರಿಷ್ಠರಿಗೆ ವಿವರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.
ಹೈಕಮಾಂಡ್ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಕರಣದ ತನಿಖೆಗೆ ಜಿಲ್ಲಾಧಿಕಾರಿಗಳ ನೇತೃತ್ವದ ಮ್ಯಾಜಿಸ್ಟ್ರಿಯಲ್ ತನಿಖೆ, ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕಸದಸ್ಯ ಆಯೋಗ ರಚನೆ ಮೈಕೆಲ್ ಡಿ ಕುನ್ಹಾ, ಐದು ಪೊಲೀಸ್ ಅಧಿಕಾರಿಗಳ ಅಮಾನತು, ಗುಪ್ತಚರ ಇಲಾಖೆಯ ಮುಖ್ಯಸ್ಥರ ಬದಲಾವಣೆ, ರಾಜಕೀಯ ಕಾರ್ಯದರ್ಶಿಗಳ ಬದಲಾವಣೆಯಂತಹ ಸರ್ಕಾರದ ಕ್ರಮಗಳು ಸಮರ್ಪಕವಾಗಿರುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಏಕಸದಸ್ಯ ಆಯೋಗದ ತನಿಖಾ ವರದಿಯನ್ನು ಆಧರಿಸಿ, ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.ಇದನ್ನೂ ಓದಿ: ಭಾರತದ ಜನಸಂಖ್ಯೆ 146 ಕೋಟಿ – ಮಹಿಳೆಯರಲ್ಲಿ ಕುಸಿಯುತ್ತಿದೆ ಸಂತಾನೋತ್ಪತ್ತಿ
ಇದೇ ವೇಳೆ ಸಚಿವ ಸಂಪುಟ ಪುನರ್ರಚನೆ ಬಗ್ಗೆ ಮಾತನಾಡಿದ ಅವರು, ಇದೇ ತಿಂಗಳ 13ರಂದು 16ನೇ ಹಣಕಾಸಿನ ಆಯೋಗದ ಅಧ್ಯಕ್ಷರನ್ನು ಭೇಟಿಯಾಗಲು ನವದೆಹಲಿಗೆ ಆಗಮಿಸಲಿದ್ದೇನೆ. ಸಚಿವ ಸಂಪುಟ ಪುನರ್ರಚನೆಯ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದರು.
ಕೇಂದ್ರದ ಸಂಸತ್ನಲ್ಲಿ ಬೆಂಗಳೂರಿನ ಕಾಲ್ತುಳಿತದ ಘಟನೆ ಚರ್ಚೆಗೆ ಬರುವ ಸಾಧ್ಯತೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರ ಮೊದಲು ಕುಂಭಮೇಳದಲ್ಲಿ ನಡೆದ ಕಾಲ್ತುಳಿತ, ಪ್ರಧಾನಿಯವರು ಉದ್ಘಾಟಿಸಿದ ಸೇತುವೆ ಕುಸಿದು ಜನ ಮೃತಪಟ್ಟ ಘಟನೆಯ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಯಲಿ. ಬೆಂಗಳೂರಿನಲ್ಲಿ ಘಟನೆ ನಡೆದಿರುವುದಕ್ಕೆ ಸರ್ಕಾರಕ್ಕೆ ದು:ಖದ ಸಂಗತಿಯಾಗಿದೆ. ಯುವಜನರ ಸಾವು ಎಲ್ಲರಿಗೂ ನೋವು ತರುವ ವಿಚಾರ. ಕುಂಭಮೇಳದಲ್ಲಿ ಜನರು ಸಾವನ್ನಪ್ಪಿದ್ದಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜವಾಬ್ದಾರಿಯಲ್ಲವೇ ಎಂದು ಪ್ರಶ್ನಿಸಿದರು.
ಇಡಿ ತನಿಖಾ ಸಂಸ್ಥೆ 100 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕಾನೂನು ಕ್ರಮ ತೆಗೆದುಕೊಂಡಿರುವುದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದರು.ಇದನ್ನೂ ಓದಿ: ಇಂದು ಮಧ್ಯರಾತ್ರಿ ಮೇಘಾಲಯಕ್ಕೆ ಹಂತಕಿ ಸೋನಮ್