ವಿಮಾನ ಪತನ | ಪ್ರಯಾಣಿಕರ ಕುಟುಂಬಸ್ಥರಿಗೆ ಧೈರ್ಯ ತುಂಬಿದ ವಿಮಾನಯಾನ ಸಚಿವ

Public TV
2 Min Read
Air India Flight Crash

ಅಹಮದಾಬಾದ್‌: ಏರ್ ಇಂಡಿಯಾ (Air India) ವಿಮಾನ ಪತನಗೊಂಡ (Air India Flight Crash) ಘಟನೆ ಬಗ್ಗೆ ಕೇಳಿ ನನಗೆ ಆಘಾತವಾಯಿತು. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ವಿಮಾನದಲ್ಲಿದ್ದ ಪ್ರಯಾಣಿಕರ ಜೊತೆ ನಾವಿದ್ದೇವೆ ಎಂದು ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು (Ram Mohan Naidu) ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.

ತ್ವರಿತವಾಗಿ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವಂತೆ ನಿರ್ದೇಶಿಸಿದ್ದೇನೆ. ಸ್ಥಳದಲ್ಲಿ ರಕ್ಷಣಾ ತಂಡಗಳನ್ನು ಸಜ್ಜುಗೊಳಿಸಲಾಗಿದೆ. ವೈದ್ಯಕೀಯ ನೆರವು ನೀಡುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ನಾನು ವೈಯಕ್ತಿಕವಾಗಿ ಪರಿಸ್ಥಿತಿಯ ಬಗ್ಗೆ ಮಾಹತಿ ಪಡೆಯುತ್ತಿದ್ದೇನೆ. ವಿಮಾನದಲ್ಲಿದ್ದ ಪ್ರಯಾಣಿಕರು ಹಾಗೂ ಅವರ ಕುಟುಂಬಗಳಿಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ: ಅಹಮದಾಬಾದ್‌ನ ವಸತಿ ಪ್ರದೇಶದಲ್ಲಿ 242 ಪ್ರಯಾಣಿಕರಿದ್ದ ವಿಮಾನ ಪತನ

ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಪರಿಣಾಮ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್‌ ಇಂಡಿಯಾ ವಿಮಾನ (Air India Plane Crash) ಅಹಮದಾಬಾದ್‌ನ (Ahmedabad) ವಿಮಾನ ನಿಲ್ದಾಣ ಸಮೀಪದ ಜನವಸತಿ ಪ್ರದೇಶದಲ್ಲಿ ಪತನಗೊಂಡಿದೆ.

ಸುಮಾರು 232 ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದ್ದು, ಆಕಾಶದಲ್ಲಿ ದಟ್ಟ ಹೊಗೆ ಆವರಿಸಿದೆ. ಮಧ್ಯಾಹ್ನ 1:50ರ ಸುಮಾರಿಗೆ ಅಹಮದಾಬಾದ್‌ನ ಮೇಘಾನಿ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ವಿಮಾನ ಪ್ರಯಾಣಿಕರನ್ನು ಹೊತ್ತು ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುವ ವೇಳೆ ದುರ್ಘಟನೆ ನಡೆದಿದೆ. ಟೇಕಾಫ್‌ ಆದ 2 ಕಿ.ಮೀ ದೂರದಲ್ಲಿ ವಿಮಾನ ಪತನಗೊಂಡಿದೆ.

ಈ ಅವಘಡದಲ್ಲಿ 110 ಮಂದಿ ಸಾವಿಗೀಡಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಆತಂಕವಿದೆ. ಇದನ್ನೂ ಓದಿ: ಧಾರವಾಡದಲ್ಲಿ ವರುಣನ ಆರ್ಭಟ – ಬೆಣ್ಣಿ ಹಳ್ಳದಲ್ಲಿ ಸಿಲುಕಿ ಕುಟುಂಬ ಪರದಾಟ

Share This Article