– ನಡೆಯಲಿದೆ ದ್ವಿತಿಯ ಪಿಯುಸಿ ಪರೀಕ್ಷೆ – 3
ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಕೊಡಗಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜೂನ್ 16 ರಂದು ರಜೆ ಘೋಷಿಸಲಾಗಿದೆ.
ದ್ವಿತೀಯ ಪಿಯು ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜ ಅವರು ಆದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡದ 5 ತಾಲೂಕು, ಉಡುಪಿ ಜಿಲ್ಲೆಯ ಶಾಲೆಗಳಿಗೆ ಸೋಮವಾರ ರಜೆ
ಚಿಕ್ಕಮಗಳೂರಲ್ಲೂ ಭಾರೀ ಗಾಳಿ (Rain) ಮಳೆಯಾಗುತ್ತಿದ್ದು, ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಸೋಮವಾರ (ಜೂ.16) 6 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ (Chikkamagaluru) ಘೋಷಣೆ ಮಾಡಲಾಗಿದೆ. ಇನ್ನೂ, ಭಾರೀ ಮಳೆಯಾಗಲಿರುವ (Heavy Rain) ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ 5 ತಾಲೂಕುಗಳಿಗೆ ಮತ್ತು ಉಡುಪಿ (Udupi) ಜಿಲ್ಲೆಯ ಶಾಲೆಗಳಿಗೆ (School) ಸಹ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಭಾರೀ ಮಳೆ – ಚಿಕ್ಕಮಗಳೂರಿನ 6 ತಾಲೂಕುಗಳ ಶಾಲೆಗಳಿಗೆ ಜೂ.16ರಂದು ರಜೆ ಘೋಷಣೆ