ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ರಜನಿಕಾಂತ್ (Rajinikanth) ನಟನೆಯೆ ‘ಜೈಲರ್ 2’ (Jailer 2) ಚಿತ್ರದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
‘ಜೈಲರ್ 2’ನಲ್ಲಿ ಮೋಹನ್ ಲಾಲ್, ಶಿವರಾಜ್ ಕುಮಾರ್ ಮತ್ತು ಜಾಕಿ ಶ್ರಾಫ್ ನಟಿಸಲಿದ್ದಾರೆ. ಅಲ್ಲದೇ ಬಾಲಿವುಡ್‌ನ ಪ್ರಮುಖ ನಟರೊಬ್ಬರು ಕಾಣಿಸಿಕೊಳ್ಳಲಿದ್ದಾರೆ. ಈ ವದಂತಿ ಬೆನ್ನಲ್ಲೇ ಚಿತ್ರದಲ್ಲಿ ಶಾರುಖ್ ಖಾನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆಯೇ? ಎಂಬ ಚರ್ಚೆ ಆರಂಭವಾಗಿದೆ. ಇನ್ನೂ, ಶಾರುಖ್ ಖಾನ್ ಈ ಚಿತ್ರದಲ್ಲಿಲ್ಲ. ಅವರು ಅತಿಥಿ ಪಾತ್ರದಲ್ಲಿ ನಟಿಸುವ ಸಾಧ್ಯತೆಯಿಲ್ಲ ಎಂದು ಸಹ ಹೇಳಲಾಗುತ್ತಿದೆ. ಇದನ್ನೂ ಓದಿ: ರಜನಿಕಾಂತ್ ನಟನೆಯ ‘ಜೈಲರ್ 2’ನಲ್ಲಿಯೂ ನಟಿಸಲಿದ್ದಾರೆ ಶಿವಣ್ಣ
‘ಜೈಲರ್ 2’ 2023ರ ಸೂಪರ್‌ಹಿಟ್ ಚಿತ್ರ ‘ಜೈಲರ್’ ನ ಮುಂದುವರಿದ ಭಾಗವಾಗಿದೆ. ಈ ಚಿತ್ರದಲ್ಲಿ ತೆಲುಗು ನಟ ನಂದಮೂರಿ ಬಾಲಕೃಷ್ಣ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಗಾರ್ಜುನ ಅಕ್ಕಿನೇನಿ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಈ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟಿಸುತ್ತಿರುವುದಾಗಿ ಇತ್ತೀಚೆಗೆ ಹೈದರಾಬಾದ್‌ನಲ್ಲಿ ಹೇಳಿಕೊಂಡಿದ್ದರು. ಈ ಬಗ್ಗೆ ನಿರ್ದೇಶಕ ನೆಲ್ಸನ್ ತಮ್ಮ ಬಳಿ ಚರ್ಚಿಸಿದ್ದಾರೆ. ಚಿತ್ರದಲ್ಲಿ ನನ್ನ ಪಾತ್ರದ ಚಿತ್ರೀಕರಣ ಇನ್ನೂ ಆರಂಭವಾಗಿಲ್ಲ ಎಂದಿದ್ದರು. ಇದನ್ನೂ ಓದಿ: ‘666 ಆಪರೇಷನ್ ಡ್ರೀಮ್ ಥಿಯೇಟರ್’ನಲ್ಲಿ ಡಾಲಿ, ಶಿವಣ್ಣ