ಚೆನ್ನೈ: ಬೆಳ್ಳಂಬೆಳಗ್ಗೆ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.
ಇಲ್ಲಿನ ವಡಪಲನಿಯಲ್ಲಿರುವ ಅಪಾರ್ಟ್‍ಮೆಂಟ್‍ನಲ್ಲಿ ಇಂದು ಬೆಳಿಗ್ಗೆ 5.30ರ ವೇಳೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನ ನಿಯಂತ್ರಿಸಿದ್ದಾರೆ.
ಆದ್ರೆ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದ 7 ಜನರಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಅವರು ಸಾಕಷ್ಟು ಹೊಗೆ ಕುಡಿದಿದ್ದರಿಂದ ಸಾವು ಸಂಭವಿಸಿದೆ. ಯಾರಿಗೂ ಸುಟ್ಟ ಗಾಯಗಳಾಗಿರಲಿಲ್ಲ ಎಂದು ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಪಾರ್ಟ್‍ಮೆಂಟ್‍ನ ಪಾರ್ಕಿಂಗ್ ಜಾಗದಲ್ಲಿ ವಿದ್ಯುತ್ ದೋಷದಿಂದ ಈ ಅವಘಡ ಸಂಭವಿಸಿರಬಹುದು ಎಂದು ಅಗ್ನಿಶಾಮಕ ಸಳದ ಅಧಿಕಾರಿಗಳು ಶಂಕಿಸಿದ್ದಾರೆ. ಕಟ್ಟಡದಲ್ಲಿ ನಿಲ್ಲಿಸಲಾಗಿದ್ದ 10ಕ್ಕೂ ಹೆಚ್ಚು ಬೈಕ್‍ಗಳು ಸಹ ಸುಟ್ಟು ಭಸ್ಮವಾಗಿವೆ.
Chennai (Tamil Nadu): 4 people dead and 5 injured after fire broke out in an apartment in Vadapalani area, situation now under control pic.twitter.com/3iCUTtpF5e
— ANI (@ANI_news) May 8, 2017