ಕಲಬುರಗಿ: ವಸತಿ ಇಲಾಖೆಯಲ್ಲಿನ ಲಂಚದ (Housing Department Corruption) ಆಡಿಯೋ ವೈರಲ್ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ (CM Siddaramaiah) ಈಗ ಶಾಸಕ ಬಿಆರ್ ಪಾಟೀಲ್ (BR Patel) ಅವರಿಗೆ ಬುಲಾವ್ ನೀಡಿದ್ದಾರೆ.
ಪಕ್ಷಕ್ಕೆ ಮುಜುಗರವಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಬಿ.ಆರ್.ಪಾಟೀಲ್‌ಗೆ ಖುದ್ದು ಫೋನ್ ಮಾಡಿ ಜೂ.25ರ ಸಂಜೆ ಬೆಂಗಳೂರಿನಲ್ಲಿ (Bengaluru) ಭೇಟಿಯಾಗುವಂತೆ ಸೂಚಿಸಿದ್ದಾರೆ.
ಇದನ್ನೂ ಓದಿ: ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ಅಕ್ರಮ – ಶಾಸಕ ಬಿಆರ್ ಪಾಟೀಲ್ ಮತ್ತೊಂದು ಬಾಂಬ್
ಕಳೆದ ವರ್ಷ ವಾಲ್ಮೀಕಿ (Valmiki Scam) ನಿಗಮದ ಹಗರಣ ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಇದು ಸಿದ್ದರಾಮಯ್ಯ ಸರ್ಕಾರಕ್ಕೆ ಮುಜುಗರ ಕೂಡ ಉಂಟು ಮಾಡಿತ್ತು. ಈಗ ಬಿ.ಆರ್.ಪಾಟೀಲ್, ತಮ್ಮ ಸರ್ಕಾರದಲ್ಲಿನ ಭ್ರಷ್ಟಾಚಾರ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡಿ ಸಿದ್ದರಾಮಯ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ಇದನ್ನೂ ಓದಿ: ಲೇಡಿ ಕಿಲ್ಲರ್‌ನಿಂದ ಇರಾನ್ ನಾಶ – ಇಸ್ರೇಲ್ ನಿಖರ ದಾಳಿ ಹಿಂದಿದ್ದಾಳೆ ಸುಂದರಿ!
ವಸತಿ ಇಲಾಖೆ ಭ್ರಷ್ಟಾಚಾರ ಬಗ್ಗೆ ಮಾತನಾಡಿದ್ದ ಬಿ.ಆರ್ ಪಾಟೀಲ್ ಇದೀಗ ಮೈನಾರಿಟಿ ಇಲಾಖೆಯಲ್ಲಿನ ಭ್ರಷ್ಟಾಚಾರವನ್ನ ಬಿಚ್ಚಿಟ್ಟಿದ್ದಾರೆ. ಇದು ಸಿದ್ದರಾಮಯ್ಯ ಸರ್ಕಾರಕ್ಕೆ ಇನ್ನಿಲ್ಲ ಸಂದಿಗ್ಧ ಪರಿಸ್ಥಿತಿಗೆ ಸಿಲುಕಿಸಿದೆ.