ಬೆಂಗಳೂರು: ಐಶ್ವರ್ಯಗೌಡ ವಂಚನೆ ಪ್ರಕರಣದಲ್ಲಿ (Fraud Case) ಮಾಜಿ ಸಂಸದ, ಕಾಂಗ್ರೆಸ್ ಮುಖಂಡ ಡಿ.ಕೆ.ಸುರೇಶ್ (DK Suresh) ಇಂದು ಇಡಿ ತನಿಖೆ ಎದುರಿಸಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆವರೆಗೆ ಸುದೀರ್ಘ 7 ಗಂಟೆಗಳ ವಿಚಾರಣೆ ಎದುರಿಸಿದ್ದಾರೆ. ಜುಲೈ 8ಕ್ಕೆ ಮತ್ತೆ ವಿಚಾರಣೆಗೆ ಬರುವಂತೆ ಇಡಿ ಸೂಚಿಸಿದೆ.
ಈ ನಡುವೆ ಐಶ್ವರ್ಯಗೌಡಗೆ (Aishwarya Gowda) ಸೇರಿದ್ದ 3.98 ಕೋಟಿ ಆಸ್ತಿಯನ್ನು ಇಡಿ ಜಪ್ತಿ ಮಾಡಿದೆ. ಇದರಲ್ಲಿ 2.01 ಕೋಟಿ ಮೌಲ್ಯದ ಫ್ಲ್ಯಾಟ್, 1.97 ಕೋಟಿ ಮೌಲ್ಯದ ನಗದು, ಚಿನ್ನಾಭರಣ ಸೇರಿದೆ. ಆಸ್ತಿ ಸೀಜ್ ಆಗಿರೊ ಬಗ್ಗೆ ಇಡಿ ಅಧಿಕೃತ ಮಾಹಿತಿ ಹಂಚಿಕೊಂಡಿದೆ.ಇದನ್ನೂ ಓದಿ: ಮದ್ವೆಯಾದ ಒಂದೇ ತಿಂಗಳಿಗೆ ಪತಿ ಶವವಾಗಿ ಪತ್ತೆ – ಬ್ಯಾಂಕ್ ಉದ್ಯೋಗಿ ಜೊತೆಗಿನ ಅಫೇರ್ ಕಾರಣ; ರಹಸ್ಯ ಬಯಲು

ಐಶ್ವರ್ಯಗೌಡಳ ಮೇಲೆ ರಾಜ್ಯದಲ್ಲಿ ವಂಚನೆ ಸಂಬಂಧ ಹಲವು ಎಫ್‌ಐಆರ್‌ಗಳಾಗಿದ್ವು. ಅಕ್ರಮ ಹಣ ವರ್ಗಾವಣೆ ಹಿನ್ನೆಲೆ ಇದೀಗ ಇಡಿ ಐಶ್ವರ್ಯಳ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ.
ಇನ್ನೂ ವಿಚಾರಣೆ ಬಳಿಕ ಮಾತನಾಡಿದ ಡಿ.ಕೆ ಸುರೇಶ್, ಇಡಿ ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದೇನೆ. ಜುಲೈ 8ಕ್ಕೆ ವಿಚಾರಣೆಗೆ ಕರೆದಿದ್ದಾರೆ. ಸಹಕಾರ ಕೊಡ್ತೇನೆ ಅಂದಿದ್ದಾರೆ. ಇದನ್ನೂ ಓದಿ: ಉಪಚುನಾವಣೆ ಫಲಿತಾಂಶ ಪ್ರಕಟ – ಎಎಪಿ 2, ಬಿಜೆಪಿ, ಕಾಂಗ್ರೆಸ್, ಟಿಎಂಸಿ ತಲಾ ಒಂದೊಂದು ಕ್ಷೇತ್ರಗಳಲ್ಲಿ ಗೆಲುವು
 


 
		 
		 
		 
		 
		
 
		 
		 
		 
		