– ಇಬ್ಬರನ್ನೂ ಬಂಧಿಸಿದ್ದ ದಾಬಸ್ಪೇಟೆ ಪೊಲೀಸರು
ಬೆಂಗಳೂರು: ನೆಲಮಂಗಲ ರೋಡ್ ರೇಜ್ (Nelamangala Road Rage) ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಂಸದ ಅನಂತಕುಮಾರ್ ಹೆಗಡೆ (Anantkumar Hegde) ಗನ್ಮ್ಯಾನ್ ಮತ್ತು ಕಾರ್ ಡ್ರೈವರ್ಗೆ ಜಾಮೀನು ಮಂಜೂರು ಮಾಡಲಾಗಿದೆ.
ರೋಡ್ ರೇಜ್ ಕೇಸಲ್ಲಿ ಹೆಗಡೆ ಗನ್ಮ್ಯಾನ್ ಶ್ರೀಧರ್ ಮತ್ತು ಡ್ರೈವರ್ ಮಹೇಶ್ ಎಂಬವರನ್ನು ದಾಬಸ್ಪೇಟೆ ಪೊಲೀಸರು ಬಂಧಿಸಿದ್ದರು. ವೈದ್ಯಕೀಯ ಪರೀಕ್ಷೆ ಬಳಿಕ ನೆಲಮಂಗಲ ಕೋರ್ಟ್ಗೆ ಹಾಜರುಪಡಿಸಿದರು. ಇದನ್ನೂ ಓದಿ: Tumakuru | ಸ್ಟೇಟಸ್ಗೆ ರೀಲ್ಸ್ ಅಪ್ಲೋಡ್ ಮಾಡಿದ್ದಕ್ಕೆ ಪ್ರಿಯಕರ ಕಿರಿಕ್ – ಯುವತಿ ನೇಣಿಗೆ ಶರಣು
ನ್ಯಾಯಾಲಯದಲ್ಲಿ ಅನಂತಕುಮಾರ್ ಹೆಗಡೆ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದರು. ಇಬ್ಬರ ಪರ ವಕೀಲ ನಾಗೇಂದ್ರ ವಾದ ಮಂಡಿಸಿದರು. ನೋಟಿಸ್ ಕೊಡದೇ ಇಬ್ಬರನ್ನೂ ಬಂಧನ ಮಾಡಿದ್ದಾರೆ. 112ಗೆ ಕರೆ ಬಂದ ತಕ್ಷಣ ಠಾಣೆಗೆ ಕರೆದೊಯ್ದಿದ್ದಾರೆ. ಎಫ್ಐಆರ್ ದಾಖಲಾಗುವ ಮುನ್ನ ಬಂಧನ ತೋರಿಸಿದ್ದಾರೆ ಎಂದು ವಾದಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶೆ ಪೂಜಾ ಶೆಟ್ಟಿ ಅವರು ಜಾಮೀನು ಮಂಜೂರು ಮಾಡಿದ್ದಾರೆ.
ಇಬ್ಬರಿಗೂ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಕೋರ್ಟ್ನಲ್ಲಿ ವಕೀಲ ನಾಗೇಂದ್ರ, ವಕೀಲ ಕೆಡಿಎಂ ನಾಯಕ್ ವಾದ ಮಂಡಿಸಿದ್ದರು. ಇದನ್ನೂ ಓದಿ: ಚಾ.ನಗರ ಜಿಲ್ಲೆಯಲ್ಲಿ ಇದೆಂಥಾ ಘಟನೆ?- ಮುಖ್ಯ ಅಡುಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕಕ್ಕೆ ಅಸಮಾಧಾನ