ಹೇಮಾವತಿ ಲಿಂಕ್ ಕೆನಾಲ್ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

Public TV
2 Min Read
Hemavathi link canal D.K.Shivakumar

– ಕೇಂದ್ರ ಸಚಿವ ಸೋಮಣ್ಣ ಮನವಿ ಮೇರೆಗೆ ಜು.4-5ಕ್ಕೆ ಮುಂದೂಡಿಕೆ

ಬೆಂಗಳೂರು: ಕೇಂದ್ರ ಸಚಿವ ಸೋಮಣ್ಣ (V.Somanna) ಅವರ ಮನವಿ ಮೇರೆಗೆ ಇದೇ ತಿಂಗಳು 30ರಂದು ನಡೆಯಬೇಕಿದ್ದ ಹೇಮಾವತಿ ಲಿಂಕ್ ಕೆನಾಲ್ (Hemavathi Link Canal) ಸಭೆಯನ್ನು ಜುಲೈ 4-5ಕ್ಕೆ ಮುಂದೂಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.Shivakumar) ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಶಿವಕುಮಾರ್ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಸೋಮಣ್ಣ ಅವರು ಸ್ಥಳೀಯ ಸಂಸದರೂ ಆಗಿರುವ ಕಾರಣ ಅವರಿಗೆ ಅನುಕೂಲವಾಗುವಂತೆ ಸಭೆ ಮುಂದೂಡಲಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ರಾಮನಗರ-ತುಮಕೂರು ಮಧ್ಯೆ ಹೇಮಾವತಿ ಕಲಹ – ಸರ್ವಪಕ್ಷ ಸಭೆ ಕರೆಯಲು ಬಿಜೆಪಿ ಆಗ್ರಹ

Hemavathi Express Canal Link 2

ಎತ್ತಿನಹೊಳೆ ಯೋಜನೆ ಗುತ್ತಿಗೆದಾರರ ಸಭೆ ಮುಂದೂಡಿಕೆ
ಇಂದು ತುಮಕೂರಿನಲ್ಲಿ ಯೋಜನೆ ಕಾಮಗಾರಿಯ ಗುತ್ತಿಗೆದಾರರ ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಪರಮೇಶ್ವರ್ ಅವರ ಅನುಪಸ್ಥಿತಿ ಹಿನ್ನೆಲೆಯಲ್ಲಿ ಈ ಸಭೆಯನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಈ ಸಭೆ ನಾಳೆ ಅಥವಾ ನಾಡಿದ್ದು ನಡೆಯಲಿದೆ ಎಂದು ಹೇಳಿದರು.

ಆದ್ಯತೆ ಮೇರೆಗೆ ಎತ್ತಿನಹೊಳೆ ಯೋಜನೆಯನ್ನು ನಿಗದಿತ ಸಮಯದ ಒಳಗೆ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ನಿರ್ದೇಶನ ನೀಡಿದ್ದಾರೆ. ಹೀಗಾಗಿ, ಈ ಯೋಜನೆ ಕಾಮಗಾರಿ ಪರಿಶೀಲನೆ ಮಾಡಲಾಗುತ್ತಿದೆ. ಈ ಯೋಜನೆಗೆ ಎಲ್ಲೆಲ್ಲಿ ಸಮಸ್ಯೆ ಇದೆ ಎಂದು ಪರಿಶೀಲನೆ ಮಾಡಲು ನಾನು ತುಮಕೂರಿಗೆ ಭೇಟಿ ನೀಡಿದ್ದೇನೆ ಎಂದರು. ಇದನ್ನೂ ಓದಿ: ಭುಗಿಲೆದ್ದ ರೈತರ ಆಕ್ರೋಶ – ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ತಾತ್ಕಾಲಿಕ ಸ್ಥಗಿತ

ನಾನು ಈಗಾಗಲೇ ದೊಡ್ಡಬಳ್ಳಾಪುರ, ಕೊರಟಗೆರೆಗೆ ಭೇಟಿ ನೀಡಿದ್ದೇನೆ. ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರಾಗಿದ್ದ ಪರಮೇಶ್ವರ್ ಅವರ ಜೊತೆ ಚರ್ಚೆ ಮಾಡಿದ್ದೇನೆ. ಈ ಭಾಗದಲ್ಲಿ ನೀರನ್ನು ಯಾವ ರೀತಿ ಸಂಗ್ರಹಿಸುವುದು ಎಂಬ ತಾಂತ್ರಿಕ ಸಾಧ್ಯತೆಗಳ ಪರಿಶೀಲನೆ ನಡೆಸುತ್ತಿದ್ದೇವೆ. ಈಗಾಗಲೇ ಸ್ಥಳೀಯ ನಾಯಕರು, ಗ್ರಾಮಸ್ಥರ ಜೊತೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಸಾರ್ವಜನಿಕರು ತಮ್ಮ ನೋವು ಹೇಳಿಕೊಂಡಿದ್ದಾರೆ. ಒಂದು ಕಡೆ ಅಣೆಕಟ್ಟು ನಿರ್ಮಾಣ ಮಾಡಬೇಕೆ, ಎರಡು ಕಡೆ ಮಾಡಬೇಕೆ ಅಥವಾ ಜನರ ಸಲಹೆಯಂತೆ ಕೆರೆಗಳನ್ನು ಬಳಸಿಕೊಂಡು ನೀರು ಸಂಗ್ರಹಿಸಬಹುದೇ ಎಂಬ ಸಾಧ್ಯತೆಗಳನ್ನು ಅಧ್ಯಯನ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಹೇಮಾವತಿ ಲಿಂಕ್ ಕೆನಾಲ್ ಕದನ – ಇಬ್ಬರು ಸ್ವಾಮೀಜಿಗಳು ಸೇರಿ ನೂರಾರು ರೈತರ ವಿರುದ್ಧ FIR

Share This Article