ಮಹದೇಶ್ವರ ಬೆಟ್ಟದಲ್ಲಿ 4 ಹುಲಿಗಳ ಅಸಹಜ ಸಾವು – ತನಿಖೆಗೆ ಈಶ್ವರ ಖಂಡ್ರೆ ಆದೇಶ

Public TV
1 Min Read
Eshwar Khandre

ಬೆಂಗಳೂರು/ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ (Male Mahadeshwar Hills) ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು ಅಸಹಜವಾಗಿ ಸಾವಿಗೀಡಾಗಿದ್ದು, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆ ನಡೆಸಬೇಕು ಎಂದು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ದುಃಖ ವ್ಯಕ್ತಪಡಿಸಿದ ಅವರು, ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿದ್ದಾರೆ. ಕಾನನದಲ್ಲಿ 4 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.ಇದನ್ನೂ ಓದಿ: ಮುಸ್ಲಿಂ ಮಹಿಳೆಯರು ಖುಲಾ ಮೂಲಕ ವಿಚ್ಛೇದನ ಪಡೆಯಲು ಪತಿಯ ಒಪ್ಪಿಗೆ ಅಗತ್ಯವಿಲ್ಲ – ತೆಲಂಗಾಣ ಹೈಕೋರ್ಟ್

ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದೆ. 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ.

Eshwar Khandre

ಕೂಡಲೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ, ಸ್ಥಳ ತನಿಖೆ ಕೈಗೊಂಡು, ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಅವರ ವಿರುದ್ಧ ಅಥವಾ ವಿದ್ಯುತ್ ಸ್ಪರ್ಶ, ವಿಷ ಪ್ರಾಷನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಕ್ರಮ ವಹಿಸುವಂತೆ ಸೂಚಿಸಿದ್ದಾರೆ ಹಾಗೂ 3 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಆದೇಶ ನೀಡಿದ್ದಾರೆ.ಇದನ್ನೂ ಓದಿ: Mandya | ಕೆಆರ್‌ಎಸ್‌ ಡ್ಯಾಂನಿಂದ ಕಾವೇರಿ ನದಿಗೆ 45,000 ಕ್ಯೂಸೆಕ್ ನೀರು

Share This Article