ಜು.2ರಿಂದ 4 ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
1 Min Read
Weather

ಬೆಂಗಳೂರು: ರಾಜ್ಯದಲ್ಲಿ ಕೊಂಚ ಬಿಡುವು ನೀಡಿದ್ದ ಮಳೆರಾಯ ಇದೀಗ ಮತ್ತೆ ಅಬ್ಬರಿಸುವ ಸಾಧ್ಯತೆಯಿದ್ದು, ಜು.2ರಿಂದ 5ರ ವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.

ಕಳೆದೆರೆಡು ವಾರದಿಂದ ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿತ್ತು. ಸದ್ಯ ಹವಾಮಾನ ಇಲಾಖೆ ಮಳೆ ಮೂನ್ಸುಚನೆ ನೀಡಿದ್ದು, ಇಂದಿನಿಂದ ರಾಜ್ಯದ ಬಹುತೇಕ ಕಡೆ ಮಳೆಯಾಗುವ ಬಗ್ಗೆ ಸಾಧ್ಯತೆಯಿದೆ.ಇದನ್ನೂ ಓದಿ: ಭಾರತ ಹೊರಗಿಟ್ಟು ಸಾರ್ಕ್‌ಗೆ ಪರ್ಯಾಯವಾಗಿ ಹೊಸ ಪ್ರಾದೇಶಿಕ ಒಕ್ಕೂಟ ರಚಿಸಲು ಚಿಂತನೆ

ಕರಾವಳಿ ಕರ್ನಾಟಕದಲ್ಲಿ (Coastal Karnataka) ವರುಣನ ಅಬ್ಬರ ತಗ್ಗಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನಾಳೆ (ಜು.1) ಉಡುಪಿ, ದಕ್ಷಿಣ ಕನ್ನಡ ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ. ಇನ್ನುಳಿದಂತೆ ಜು.2ರಿಂದ 5ರವರೆಗೆ ರಾಜ್ಯಾದ್ಯಂತ ಯೆಲ್ಲೋ ಅಲರ್ಟ್ ನೀಡಲಾಗಿದೆ.

93 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಜೂನ್‌ನಲ್ಲಿ ಕೆಆರ್‌ಎ (KRS)  ಭರ್ತಿಯಾಗಿರುವ ಹಿನ್ನೆಲೆ ಸೋಮವಾರ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಬಾಗಿನ ಅರ್ಪಿಸಿದರು. ಅತ್ತ ತಮಿಳುನಾಡಿನ ಮೆಟ್ಟೂರು ಜಲಾಶಯವು ಕೂಡ ಭರ್ತಿಯಾಗಿದೆ.

ಇನ್ನೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಜಿಲ್ಲೆಯ ಜಲಪಾತಗಳಿಗೆ ಜೀವ ಕಳೆ ಬಂದಿದ್ದು, ಅಘನಾಶಿನಿ ನದಿಗೆ ಹೆಚ್ಚಿನ ನೀರು ಹರಿದು ಬಂದಿದೆ. ಉಂಚಳ್ಳಿ ಜಲಪಾತದಲ್ಲಿ ಹೆಚ್ಚಿನ ನೀರು ರಭಸವಾಗಿ ಹರಿಯುವ ಮೂಲಕ ತನ್ನ ಸೌಂದರ್ಯ ಹೆಚ್ಚಿಸಿಕೊಂಡಿದೆ. ನಾರಾಯಣಪುರ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಹಿನ್ನೆಲೆ ರಾಯಚೂರು ತಾಲೂಕಿನ ಕೃಷ್ಣಾ ನದಿ ದಂಡೆಯಲ್ಲಿರುವ ಕಾಡ್ಲೂರು ಉಪೇಂದ್ರ ತೀರ್ಥ ಕರಾರ್ಚಿತ ಪ್ರಾಣ ದೇವರ ದೇವಸ್ಥಾನ ಜಲಾವೃತಗೊಂಡಿದೆ.ಇದನ್ನೂ ಓದಿ: ತೆಲಂಗಾಣ | ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ – 8 ಮಂದಿ ದುರ್ಮರಣ, ಹಲವರಿಗೆ ಗಾಯ

Share This Article