ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿ ನಟ ಶಿವರಾಜ್‌ಕುಮಾರ್ (Shiva Rajkumar) ತಮ್ಮ ಪತ್ನಿ ಜೊತೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದರು.
ಮಂಗಳವಾರ ರಾತ್ರಿ ಬೆಟ್ಟಕ್ಕೆ ಆಗಮಿಸಿದ ಶಿವಣ್ಣ ದಂಪತಿ ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿದರು. ಈ ವೇಳೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದರು. ಇದನ್ನೂ ಓದಿ: ಉದಯಪುರದಲ್ಲಿ ಭರ್ಜರಿ ಡೆವಿಲ್ ಮೇಕಿಂಗ್!
ಕಳೆದ ಕೆಲ ದಿನಗಳಿಂದ ಶಿವರಾಜ್‌ಕುಮಾರ್ ಮೈಸೂರು ಭಾಗದ ಸುತ್ತಮುತ್ತ ಪ್ರವಾಸ ಕೈಗೊಂಡಿದ್ದಾರೆ. ಮೊನ್ನೆಯಷ್ಟೇ ಪತ್ನಿ ಜೊತೆಗೂಡಿ ಶಿವಣ್ಣ ಕಬಿನಿ ಡ್ಯಾಂಗೆ ಭೇಟಿ ನೀಡಿದ್ದರು. ಈ ವೇಳೆ ಹಾಡಿ ಮಕ್ಕಳ ಜೊತೆ ಫೋಟೊ ಕೂಡ ತೆಗೆಸಿಕೊಂಡಿದ್ದರು.
1986ರಲ್ಲಿ ‘ಆನಂದ್’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಶಿವಣ್ಣ ಎಂಟ್ರಿ ಕೊಟ್ಟರು. ಸಿನಿ ಜರ್ನಿಯಲ್ಲಿ 40 ವರ್ಷ ಪೂರೈಸಿದ್ದಾರೆ. ಕನ್ನಡದ ಜನಮಾನಸದಲ್ಲಿ ಹ್ಯಾಟ್ರಿಕ್ ಹೀರೋ, ಸೆಂಚುರಿ ಸ್ಟಾರ್ ಆಗಿ ಉಳಿದಿದ್ದಾರೆ. ಇದನ್ನೂ ಓದಿ: ಇಂಡಸ್ಟ್ರಿಯಲ್ಲಿ ನನಗೆ ಯಾರೂ ಫ್ರೆಂಡ್ಸ್ ಇಲ್ಲ… ಹೀಗ್ಯಾಕಂದ್ರು ನಯನತಾರ..?
ಶಿವರಾಜ್‌ಕುಮಾರ್ ಸದ್ಯ 125 ಸಿನಿಮಾಗಳನ್ನು ಪೂರೈಸಿದ್ದಾರೆ. ಸದ್ಯ ಅವರ ಕೈಯಲ್ಲಿ ಐದಕ್ಕೂ ಹೆಚ್ಚು ಪ್ರಾಜೆಕ್ಟ್‌ಗಳಿವೆ. ಕೆಲ ದಿನಗಳ ಹಿಂದಷ್ಟೇ ಸಿನಿಪಯಣದಲ್ಲಿ 40 ವರ್ಷದ ಪೂರೈಸಿದ ಸಂಭ್ರಮವನ್ನು ಶಿವಣ್ಣ ಮಿಂದೆದ್ದರು.