ಮಡಿಕೇರಿ: ಕಳೆದ ಹಲವು ತಿಂಗಳಿನಿಂದ ಕೊಡಗು (Kodagu) ಜಿಲ್ಲೆಗೆ ಆಗಮಿಸುತ್ತಿರುವ ಅಸ್ಸಾಂ ಮೂಲದ ಕಾರ್ಮಿಕರ ಸಂಖ್ಯೆ ಹೆಚ್ಚಾಗಿದ್ದು, ಈ ಪೈಕಿ ಕೆಲವು ಬಾಂಗ್ಲಾ ನುಸುಳುಕೋರರು (Bangladeshi Infiltrators) ಇದ್ದಾರೆ ಅನ್ನೋ ಶಂಕೆ ವ್ಯಕ್ತವಾಗಿದೆ.
ಹೌದು. ಕೊಡಗು ಜಿಲ್ಲೆಯ ಮಡಿಕೇರಿ, ಸುಂಟಿಕೊಪ್ಪ, ಕುಶಾಲನಗರ, ವಿರಾಜಪೇಟೆ, ಗೋಣಿಕೊಪ್ಪಲು, ನಾಪೋಕ್ಲು ಸೇರಿದಂತೆ ಕೊಡಗಿನ ಪ್ರಮುಖ ಪಟ್ಟಣಗಳಲ್ಲಿ ನಡೆಯುವ ವಾರದ ಸಂತೆಗಳಲ್ಲಿ ಹೊಸ ಮುಖಗಳೇ ಹೆಚ್ಚಾಗಿ ಕಂಡುಬರುತ್ತಿವೆ. ಸಂತೆಗಳಲ್ಲಿ ವ್ಯಾಪಾರ ಮಾಡುವುದರಿಂದ ಆರಂಭಿಸಿ ಹೋಂ ಸ್ಟೇ, ರೆಸಾರ್ಟ್ ಗಳಲ್ಲಿ ರೂಮ್ ಬಾಯ್ ತನಕವೂ ಹೊರ ರಾಜ್ಯದ ಕಾರ್ಮಿಕರೇ ಹೆಚ್ಚಾಗಿ ಕಂಡುಬರುತ್ತಿದ್ದಾರೆ. ಇತ್ತೀಚೆಗೆ ಕೆಲವು ಅಪರಾಧ ಪ್ರಕರಣಗಳಲ್ಲೂ ಹೊರ ರಾಜ್ಯದವರೇ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ನಿಗಾ ವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್‌ನಲ್ಲಿ ಮಂಗಳೂರಿನ ಅಣ್ಣ-ತಂಗಿ ಪದಕಗಳ ಸಾಧನೆ
ಕೊಡಗಿಗೆ ಬರುವ ವಲಸೆ ಕಾರ್ಮಿಕರು ಜಿಲ್ಲಾದ್ಯಂತ ಚದುರಿ ಹೋಗುತ್ತಿದ್ದಾರೆ. ಇದರಿಂದ ಅಕ್ರಮ ವಲಸಿಗರನ್ನು ಪತ್ತೆ ಮಾಡುವುದು ಕಷ್ಟವಾಗುತ್ತಿದೆ. ಹೀಗಾಗಿ ಕೆಲಸ ನೀಡುವ ಕಾಫಿ ತೋಟದ ಮಾಲೀಕರು, ಕಾರ್ಮಿಕರನ್ನು ಕರೆ ತರುವ ದಲ್ಲಾಳಿಗಳು ಆಯಾ ಕಾರ್ಮಿಕರ ಪೂರ್ವಾಪರ ವಿಚಾರಿಸಿ ಬಳಿಕ ಕೆಲಸಕ್ಕೆ ನೇಮಿಸಿಕೊಳ್ಳುವಂತೆ ಎಚ್ಚರಿಸಿದ್ದಾರೆ.
ಒಂದು ವೇಳೆ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡುವಂತೆ ಕೊಡಗು ಎಸ್ಪಿ ರಾಮರಾಜನ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಎಎಸ್‌ಪಿ ನಾರಾಯಣ ಬರಮಣ್ಣಿ ಅವ್ರಿಗೆ ಮತ್ತೆ ಪೋಸ್ಟಿಂಗ್ ಮಾಡ್ತೇವೆ: ಪರಮೇಶ್ವರ್