ಬೆಂಗಳೂರು: ಕೊಟ್ಟ ಸಾಲ (Loan) ವಾಪಸ್ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಮನೆಗೆ ಬೆಂಕಿ ಹಚ್ಚಿದ ಘಟನೆ ವಿವೇಕ್ ನಗರದಲ್ಲಿ (Vivek Nagar) ನಡೆದಿದೆ. ಜು.1 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಬೆಂಕಿ ಹಚ್ಚಿದ ಆರೋಪಿಯನ್ನು ಸುಬ್ರಮಣಿ ಎಂದು ಗುರುತಿಸಲಾಗಿದೆ. ವೆಂಕಟರಮಣಿ ಎಂಬವರ ಬಳಿ ಆರೋಪಿಯ ಸಹೋದರಿ ತನ್ನ ಮಗಳ ಮದುವೆಗಾಗಿ, 5 ಲಕ್ಷ ರೂ. ಹಣ ಪಡೆದಿದ್ದಳು. ಹಣ ಪಡೆದು ಹಲವು ವರ್ಷಗಳಾದರೂ ಹಣ ವಾಪಸ್ ನೀಡಿರಲಿಲ್ಲ. ಇದರಿಂದ ವೆಂಕಟರಮಣಿ ಹಣ ವಾಪಸ್ ಕೊಡುವಂತೆ ಕೇಳಿದ್ದರು. ಇದನ್ನೂ ಓದಿ: ಮಾಜಿ ಡಿಸಿಎಂ ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ ಎಫ್‌ಐಆರ್
ಹಣ ವಾಪಸ್ ಕೇಳಿದ್ದಕ್ಕೆ ಪಾರ್ವತಿ ಹಾಗೂ ಆಕೆಯ ಮಗಳು ವೆಂಕಟರಮಣಿಯವರ ಬಳಿ ಗಲಾಟೆ ಮಾಡಿದ್ದಾರೆ. ಇನ್ನೂ ಇದೇ ವಿಚಾರಕ್ಕೆ ಸಿಟ್ಟಾದ ಆರೋಪಿ, ವೆಂಕಟರಮಣಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪಾರಾಗಿದ್ದಾರೆ. ಆರೋಪಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಸಂಬಂಧ ವೆಂಕಟರಮಣಿ ಪುತ್ರ ವಿವೇಕ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಬಂಧನಕ್ಕೆ ಪೊಲೀಸರು (Police) ಬಲೆ ಬೀಸಿದ್ದಾರೆ. ಇದನ್ನೂ ಓದಿ: ಶರಾವತಿ ಹಿನ್ನೀರಿನ ನಡುವೆ ಕೆಟ್ಟು ನಿಂತ ಲಾಂಚ್ – ತಪ್ಪಿದ ಅನಾಹುತ