ಹಿಮಾಚಲ ಪ್ರದೇಶ | ಭಾರೀ ಮಳೆಗೆ 63 ಮಂದಿ ಸಾವು – 400 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಹಾನಿ

Public TV
1 Min Read
Himachal Pradesh Rain

-40ಕ್ಕೂ ಹೆಚ್ಚು ಜನರು ನಾಪತ್ತೆ, ಜು.7ರವರೆಗೆ ಆರೆಂಜ್ ಅಲರ್ಟ್

ಶಿಮ್ಲಾ: ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಈವರೆಗೂ 63 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದಾರೆ. ಜೊತೆಗೆ 400 ಕೋಟಿ ರೂ.ಗೂ ಹೆಚ್ಚು ಹಾನಿಯಾಗಿದೆ.

ನಿರಂತರ ಮಳೆಯಿಂದಾಗಿ ಮಂಡಿ (Mandi) ಜಿಲ್ಲೆಯೊಂದರಲ್ಲಿಯೇ ಹನ್ನೊಂದು ಜನರು ಸಾವನ್ನಪ್ಪಿರುವುದು ಧೃಡಪಟ್ಟಿದ್ದು, 34 ಜನರು ನಾಪತ್ತೆಯಾಗಿದ್ದಾರೆ. ಜೊತೆಗೆ ಕೆಲವೆಡೆ ರಸ್ತೆಗಳು ಸಂಪರ್ಕ ಕಡಿತಗೊಂಡಿದೆ. ವಿದ್ಯುತ್, ನೀರು ಸರಬರಾಜು ಸೇರಿದಂತೆ ಅಗತ್ಯ ಸೇವೆಗಳು ಅಸ್ತವ್ಯಸ್ತಗೊಂಡಿವೆ. ರಾಜ್ಯಾದ್ಯಂತ ಸುಮಾರು 250 ರಸ್ತೆಗಳ ಸಂಪರ್ಕ ಬಂದ್ ಆಗಿದೆ. 500ಕ್ಕೂ ಹೆಚ್ಚು ವಿದ್ಯುತ್ ವಿತರಣಾ ಟ್ರಾನ್ಸ್ಫಾರ್ಮರ್‌ಗಳು ಕಾರ್ಯನಿರ್ವಹಿಸುತ್ತಿಲ್ಲ ಮತ್ತು ಸುಮಾರು 700 ಕುಡಿಯುವ ನೀರಿನ ಘಟಕಗಳ ಮೇಲೆ ಪರಿಣಾಮ ಬೀರಿದೆ.ಇದನ್ನೂ ಓದಿ: ಗುತ್ತಿಗೆದಾರನ ಹತ್ಯೆ ಆರೋಪಿ ಮನೆಗೆ ಬೆಂಕಿ – 6 ಜನ ಅರೆಸ್ಟ್‌

ರಾಜಧಾನಿ ಶಿಮ್ಲಾದಲ್ಲಿ ಶಾಲೆಗಳು ನೀರಿನಿಂದ ಜಲಾವೃತಗೊಂಡಿದ್ದು, ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇನ್ನೂ ಒಂದೆಡೆ ಚತುಷ್ಪಥ ರಸ್ತೆಯ ಒಂದು ಭಾಗದ ಕುಸಿದಿದೆ. ಜೊತೆಗೆ ಮನೆಗಳು ಕುಸಿಯುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಸದ್ಯ ರಾಜ್ಯದ ಕೆಲವು ಕಡೆಗಳಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಸ್ಥಳೀಯ ಆಡಳಿತ ಮತ್ತು ಪೊಲೀಸರ ತಂಡಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳಲ್ಲಿ ಸಕ್ರಿಯವಾಗಿವೆ.

ಭಾರತೀಯ ಹವಾಮಾನ ಇಲಾಖೆ ಶಿಮ್ಲಾ, ಸೋಲನ್, ಸಿರ್ಮೌರ್, ಉನಾ, ಬಿಲಾಸ್ಪುರ್, ಹಮೀರ್ಪುರ್, ಕಾಂಗ್ರಾ, ಚಂಬಾ ಮತ್ತು ಮಂಡಿಗಳಿಗೆ ಜು.7ರವರೆಗೆ ಆರೆಂಜ್ ಅಲರ್ಟ್ ನೀಡಿದೆ.ಇದನ್ನೂ ಓದಿ: 2ನೇ ಆಷಾಢ ಶುಕ್ರವಾರ – ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡಿ ತಾಯಿ

Share This Article