ಚಿಕ್ಕಬಳ್ಳಾಪುರ: ಬೃಹತ್ ಗಾತ್ರದ ಗ್ರಾನೈಟ್‌ಗಳನ್ನು ಸಾಗಿಸುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಗುಡ್ಡಕ್ಕೆ ಡಿಕ್ಕಿಯಾದ ಪರಿಣಾಮ ಲಾರಿ ಮಾಲೀಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ನಡೆದಿದೆ.
ಅಪಘಾತದಲ್ಲಿ ಲಾರಿ ಮಾಲೀಕ ದೊಡ್ಡಪ್ಪಯ್ಯ ಮೃತಪಟ್ಟಿದ್ದು, ಚಾಲಕ ವೆಂಕಟೇಶ್ ಗಂಭೀರ ಗಾಯಗೊಂಡಿದ್ದಾರೆ. ಇದನ್ನೂ ಓದಿ: 10.5 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಕೇಸ್ – ಶಾಲೆಯಲ್ಲಿ ಚಿನ್ನ ಕರಗಿಸಿದ್ದ ಖದೀಮರಿಗೆ ಚೇರಮನ್ ಸಾಥ್
ರಾಷ್ಟ್ರೀಯ ಹೆದ್ದಾರಿ 69ರ ಚಿಕ್ಕಬಳ್ಳಾಪುರ ಹಾಗೂ ಗೌರಿಬಿದನೂರು ಮಧ್ಯೆ ಕಣಿವೆ ಪ್ರದೇಶದಲ್ಲಿ ಇಳಿಜಾರು ಇದ್ದು, ಒಂದೆಡೆ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದೆ. ಇದೇ ರಸ್ತೆಯಲ್ಲಿ ಚಿಕ್ಕಬಳ್ಳಾಪುರದ ಕಡೆಯಿಂದ ಗೌರಿಬಿದನೂರಿಗೆ ಗ್ರಾನೈಟ್‌ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಮನೆ ಕೆಲಸದವಳ ಜೊತೆ ಅಕ್ರಮ ಸಂಬಂಧ – ಟೆಕ್ಕಿ ಪತಿಯನ್ನೇ ಹತ್ಯೆಗೈದ ಪತ್ನಿ!
ಡಿಕ್ಕಿಯ ರಭಸಕ್ಕೆ ಲಾರಿಯಲ್ಲಿದ್ದ ಗ್ರಾನೈಟ್‌ಗಳು ಕ್ಯಾಬಿನ್‌ಗೆ ಬಡಿದ ಪರಿಣಾಮ ಕ್ಯಾಬಿನ್‌ನಲ್ಲಿದ್ದ ಲಾರಿ ಮಾಲೀಕ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಇನ್ನು ಗಂಭೀರ ಗಾಯಗೊಂಡ ಲಾರಿ ಚಾಲಕನನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ರವಿಕುಮಾರ್ ಸದನದಲ್ಲಿ ಅಲ್ಲ, ನಿಮ್ಮಾನ್ಸ್‌ನಲ್ಲಿ ಇರಬೇಕು: ಪ್ರಿಯಾಂಕ್ ಖರ್ಗೆ ಲೇವಡಿ
ಅಪಘಾತದ ಭೀಕರತೆಗೆ ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.