ಲಕ್ನೋ: ಮದುವೆ ದಿಬ್ಬಣಕ್ಕೆ ಹೊರಟಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ವರ ಸೇರಿದಂತೆ 8 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಸಂಭಾಲ್ ಜಿಲ್ಲೆಯಲ್ಲಿ ನಡೆದಿದೆ.
ಬೊಲೆರೊ ಎಸ್‌ಯುವಿ ಕಾರು ಕಾಲೇಜಿನ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ವರ ಸೇರಿದಂತೆ ಒಂದೇ ಕುಟುಂಬದ ಎಂಟು ಸದಸ್ಯರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಲೇಡಿಸ್ ಬಾರ್‌ಗಳಲ್ಲಿ ನಿಯಮ ಉಲ್ಲಂಘನೆ – ಪ್ರತಿದಿನ ಸಿಸಿಟಿವಿ ಫೂಟೇಜ್ ಕೊಡುವಂತೆ ಸಿಸಿಬಿ ರೂಲ್ಸ್
ಬೆಳಗ್ಗೆ 6:30 ರ ಸುಮಾರಿಗೆ ಜೇವಾನೈ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಜನತಾ ಇಂಟರ್ ಕಾಲೇಜು ಬಳಿ ಚಾಲಕನ ನಿಯಂತ್ರಣ ತಪ್ಪಿದಾಗ ಬೊಲೆರೊ ಕಾರು ಅತಿ ವೇಗದಲ್ಲಿ ಚಲಿಸುತ್ತಿತ್ತು ಎಂದು ವರದಿಯಾಗಿದೆ. ವಾಹನವು ಗೋಡೆಗೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿದೆ.
ವಾಹನದಲ್ಲಿ ಹತ್ತು ಜನರು ಇದ್ದರು. ಅವರೆಲ್ಲರೂ ಒಂದೇ ಕುಟುಂಬದ ಸದಸ್ಯರು. ಮದುವೆ ಸಮಾರಂಭಕ್ಕೆ ಹೋಗುತ್ತಿದ್ದರು. ಸ್ಥಳದಲ್ಲೇ ಮೃತಪಟ್ಟವರಲ್ಲಿ ವರ ಸೂರಜ್ ಕೂಡ ಸೇರಿದ್ದಾರೆ. ಸಂಭಾಲ್‌ನ ಹರ್ ಗೋವಿಂದಪುರ ಗ್ರಾಮದಿಂದ ನೆರೆಯ ಬುಡೌನ್ ಜಿಲ್ಲೆಯ ಸಿರ್ತೌಲ್‌ನಲ್ಲಿರುವ ವಧುವಿನ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದರು. ಇದನ್ನೂ ಓದಿ: ಬಿಹಾರದಲ್ಲಿ ಬಿಜೆಪಿ ನಾಯಕನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು
ಅಪಘಾತದ ತೀವ್ರತೆಗೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡಿದ್ದ ಇತರ ಮೂವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬದುಕುಳಿದ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ. ಅವರನ್ನು ಅಲಿಘರ್‌ನ ಉನ್ನತ ವೈದ್ಯಕೀಯ ಕೇಂದ್ರಕ್ಕೆ ರವಾನಿಸಲಾಗಿದೆ.
ವರ ಸೂರಜ್ (24), ವರನ ಅತ್ತಿಗೆ ಆಶಾ (26), ಆಶಾ ಅವರ ಮಗಳು ಐಶ್ವರ್ಯ (2), ಮನೋಜ್ ಅವರ ಮಗ ವಿಷ್ಣು (6), ಮತ್ತು ವರನ ಚಿಕ್ಕಮ್ಮ ಸೇರಿ ಒಟ್ಟು 8 ಮಂದಿ ಮೃತಪಟ್ಟಿದ್ದಾರೆ.