ವಡೋದರಾ ಸೇತುವೆ ಕುಸಿತ – ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

Public TV
2 Min Read
Gujarat Bridge Collapse

ಗಾಂಧೀನಗರ: ವಡೋದರಾದಲ್ಲಿ (Vadodara) ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ಪ್ರಧಾನಿ ಮೋದಿ ತಮ್ಮ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದ್ದು, ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು (Ex-Gratia) ಘೋಷಿಸಿದ್ದು, ಗಾಯಾಳುಗಳಿಗೆ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ. ಈ ಬಗ್ಗೆ ಪ್ರಧಾನ ಮಂತ್ರಿ ಕಚೇರಿ ಪ್ರಕಟಣೆ ಹಂಚಿಕೊಂಡಿದೆ.ಇದನ್ನೂ ಓದಿ: ಅಂತರಿಕ್ಷದಲ್ಲಿ ಮೊಳಕೆಯೊಡೆದ ಮೆಂತ್ಯ, ಹೆಸರುಕಾಳು – ಭಾರತದ ಶುಭಾಂಶು ಶುಕ್ಲಾ ಪ್ರಯೋಗ ಸಕ್ಸಸ್

ವಡೋದರಾ ಜಿಲ್ಲೆಯ ಪದ್ರಾ-ಮುಜ್‌ಪುರ ಪ್ರದೇಶದಲ್ಲಿ ಮಹಿಸಾಗರ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಗಂಭೀರಾ ಸೇತುವೆಯ ಒಂದು ಭಾಗ ಬುಧವಾರ ಬೆಳಿಗ್ಗೆ ಸುಮಾರು 7:30ರ ವೇಳೆಗೆ ಕುಸಿದಿದೆ. ಪರಿಣಾಮ ಸೇತುವೆಯ ಮೇಲೆ ಸಂಚರಿಸುತ್ತಿದ್ದ ಟ್ರಕ್, ವ್ಯಾನ್ ಮತ್ತು ಕಾರುಗಳು ನದಿಗೆ ಉರುಳಿ ಬಿದ್ದಿವೆ. ವಾಹನಗಳಲ್ಲಿದ್ದ 9ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ತಕ್ಷಣ ಸ್ಥಳೀಯರು ಮತ್ತು ತುರ್ತು ಸೇವಾ ಸಿಬ್ಬಂದಿ ಕಾರ್ಯಪ್ರವೃತ್ತರಾಗಿದ್ದು, ಮೃತದೇಹಗಳನ್ನು ಹೊರತೆಗೆದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ವಡೋದರಾ ಎಸ್‌ಪಿ ರೋಹನ್ ಆನಂದ್ ಹಾಗೂ ಸಂಸದ ಮಿತೇಶ್ ಪಟೇಲ್ ಸಾವನ್ನಪ್ಪಿರುವ ಕುರಿತು ಮಾಹಿತಿ ದೃಢಪಡಿಸಿದ್ದಾರೆ. ಘಟನಾ ಸ್ಥಳದಲ್ಲಿ ವಡೋದರಾ ಹಾಗೂ ಆನಂದ್ ಜಿಲ್ಲೆಗಳ ಅಧಿಕಾರಿಗಳ ನೇತೃತ್ವದಲ್ಲಿ ಬೃಹತ್ ಮಟ್ಟದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ, ವಿಪತ್ತು ನಿರ್ವಹಣಾ ತಂಡಗಳು, ಪೊಲೀಸ್ ಸಿಬ್ಬಂದಿ ಹೆಚ್ಚಿನ ಪ್ರಮಾಣದಲ್ಲಿ ಜಮಾವಣೆಗೊಂಡಿದ್ದು, ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈ ಸೇತುವೆ ಮಧ್ಯ ಗುಜರಾತ್ ಹಾಗೂ ಸೌರಾಷ್ಟ್ರವನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದ್ದು, ವಡೋದರಾ ನಗರದಿಂದ ಕೇವಲ 25 ಕಿ.ಮೀ ದೂರದಲ್ಲಿದೆ. ಸೇತುವೆ ಕುಸಿತದಿಂದಾಗಿ ಈ ಮಾರ್ಗದ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.ಇದನ್ನೂ ಓದಿ: ಸೈಕಲ್‌ನಲ್ಲಿ ತಾಯತ ಮಾರುತ್ತಿದ್ದ ಧಾರ್ಮಿಕ ಮತಾಂತರ ಗ್ಯಾಂಗ್‌ನ ಜಮಾಲುದ್ದೀನ್‌ ಈಗ 106 ಕೋಟಿ ರೂ. ಒಡೆಯ

Share This Article