ಚಂಡೀಗಢ: ಮಗಳ ರೀಲ್ಸ್ (Reels) ಚಟದಿಂದ ಬೇಸತ್ತ ತಂದೆ ಟೆನ್ನಿಸ್ ಆಟಗಾರ್ತಿ (Tennis Player) ಮಗಳನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಗುರುಗ್ರಾಮದ (Gurugram) ಸುಶಾಂತ್ ಲೋಕ್‌ನಲ್ಲಿ ನಡೆದಿದೆ.
ರಾಧಿಕಾ ಯಾದವ್ (25) ಮೃತ ಟೆನ್ನಿಸ್ ಆಟಗಾರ್ತಿ. ರಾಧಿಕ ಸುಶಾಂತ್ ಲೋಕ್‌ನ ಫೇಸ್-2 ನಿವಾಸಿಯಾಗಿದ್ದು, ರಾಜ್ಯಮಟ್ಟದ ಟೆನ್ನಿಸ್ ಆಟಗಾರ್ತಿಯಾಗಿದ್ದರು. ಅಲ್ಲದೇ ಹಲವಾರು ಸ್ಪರ್ಧೆಗಳಲ್ಲೂ ವಿಜೇತರಾಗಿದ್ದರು. ಇದನ್ನೂ ಓದಿ: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ – ಕೈ ಕೊಯ್ದುಕೊಂಡ ಲಿವ್-ಇನ್ ಪಾರ್ಟ್ನರ್
ಮಗಳು ಇನ್ಸ್ಟಾಗ್ರಾಂನಲ್ಲಿ ರೀಲ್ಸ್ ಚಟ ಬೆಳೆಸಿಕೊಂಡಿದ್ದರಿಂದ ಅಸಮಾಧಾನಗೊಂಡಿದ್ದ ತಂದೆ ಇಂದು ಮಧ್ಯಾಹ್ನದ ವೇಳೆಗೆ ರಾಧಿಕಾ ಮೇಲೆ ಐದು ಗುಂಡುಗಳನ್ನು ಹಾರಿಸಿದ್ದಾರೆ. ಈ ಪೈಕಿ ಮೂರು ಗುಂಡುಗಳು ರಾಧಿಕಾಗೆ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ʻಕೈʼ ಸರ್ಕಾರದಿಂದ ಬೀದಿ ನಾಯಿಗಳಿಗೂ ಗ್ಯಾರಂಟಿ – ಬಾಡೂಟಕ್ಕಾಗಿ ಬಿಬಿಎಂಪಿಯಿಂದ 2.80 ಕೋಟಿ ಟೆಂಡರ್
ಸದ್ಯ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದು, ಗುಂಡು ಹಾರಿಸಿದ್ದ ಬಂದೂಕನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ತಾಯಿಯನ್ನು ಬಿಟ್ಟು ವಸತಿ ನಿಲಯದಲ್ಲಿ ಇರಲಾರೆ ಎಂದ ಬಾಲಕ ನೇಣಿಗೆ ಶರಣು!