ಶಿವಮೊಗ್ಗ | ನಾನು ಕಲ್ಲು ನುಂಗಿದ್ದೇನೆ ಎಂದ ಕೈದಿ – ಆಪರೇಷನ್‌ ಮಾಡಿದಾಗ ಸಿಕ್ತು ಮೊಬೈಲ್‌!

Public TV
1 Min Read
mobile phone found during surgery on prisoners stomach in shivamogga

ಶಿವಮೊಗ್ಗ: ನಗರದ  (Shivamogga) ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್‌ ಫೋನ್‌  (Mobile Phone) ಪತ್ತೆಯಾಗಿದೆ.

ದೌಲತ್‌ ಅಲಿಯಾಸ್‌ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ, ಮೂರು ಇಂಚು ಉದ್ದದ ಮೊಬೈಲ್‌ ಫೋನ್‌ ಪತ್ತೆಯಾಗಿದೆ. ಪ್ರಕರಣವೊಂದರಲ್ಲಿ ದೌಲತ್‌ಗೆ ಶಿವಮೊಗ್ಗದ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಬಳಿಕ ಈತನನ್ನು ಜೈಲಿಗೆ ಕಳುಹಿಸಲಾಗಿತ್ತು. ಜೂ.24 ರಂದು ಜೈಲಿನ ಆಸ್ಪತ್ರೆಗೆ ಬಂದು, ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ಗುಂಡ ತಿಳಿಸಿದ್ದ. ಇದನ್ನೂ ಓದಿ: ಕೋಲ್ಕತ್ತಾ IIM ಬಾಯ್ಸ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್

ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಿದ್ದರು. ಎಕ್ಸ್‌ ರೇ ಮಾಡಿದಾಗ ದೌಲತ್‌ನ ಹೊಟ್ಟೆಯಲ್ಲಿ ವಸ್ತುವೊಂದು ಇರುವುದು ಗೊತ್ತಾಗಿತ್ತು. ಶಸ್ತ್ರಚಿಕಿತ್ಸೆ ನಡೆಸಿದಾಗ ಮೊಬೈಲ್‌ ಫೋನ್‌ ಪತ್ತೆಯಾಗಿದೆ. ನಿಷೇಧವಿದ್ದರೂ ಜೈಲಿನೊಳಗೆ ಮೊಬೈಲ್‌ ಫೋನ್‌ ತಲುಪಿರುವ ಕುರಿತು ತನಿಖೆ ನಡೆಸುವಂತೆ ಕೇಂದ್ರ ಕಾರಾಗೃಹದ ಅಧೀಕ್ಷಕ ರಂಗನಾಥ್‌.ಪಿ ಅವರು ತುಂಗಾ ನಗರ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಮೂರುವರೆ ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ ಜೀವಾವಧಿ ಶಿಕ್ಷೆ

Share This Article