ಚಿನ್ನಸ್ವಾಮಿ ಕಾಲ್ತುಳಿತ ಕೇಸ್‌ – ಆರ್‌ಸಿಬಿ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲು ಕ್ಯಾಬಿನೆಟ್‌ನಲ್ಲಿ ತೀರ್ಮಾನ

Public TV
1 Min Read
Chinnaswamy Stadium Stampede

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ನ್ಯಾ.ಮೈಕಲ್ ಡಿ.ಕುನ್ಹಾ ಆಯೋಗದ ವರದಿಯನ್ನು ಕ್ಯಾಬಿನೆಟ್ ಒಪ್ಪಿದೆ. ವರದಿಯ ಶಿಫಾರಸಿನಂತೆ ಆರ್‌ಸಿಬಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಒಪ್ಪಿಗೆ ನೀಡಿದೆ. ಕೆಎಸ್‌ಸಿಎ ವಿರುದ್ಧವೂ ಕ್ರಿಮಿನಲ್ ಕೇಸ್‌ಗೆ ಒಪ್ಪಿಗೆ ನೀಡಲಾಗಿದೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಕೇಸ್‌ – ತನಿಖಾ ವರದಿ ಸಲ್ಲಿಸಿದ ನ್ಯಾ. ಮೈಕೆಲ್ ಡಿ ಕುನ್ಹಾ

ಜು.1 ರಂದು ಮೈಕೆಲ್ ಡಿ ಕುನ್ಹಾ (Michael Cunha) ನೇತೃತ್ವದ ಏಕಸದಸ್ಯ ತನಿಖಾ ಆಯೋಗ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ (Chinnaswamy Stampede) ಪ್ರಕರಣದ ತನಿಖಾ ವರದಿಯನ್ನು ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಸಲ್ಲಿಸಿತ್ತು. ಕಾಲ್ತುಳಿತದಲ್ಲಿ 11 ಜನ ಮೃತಪಟ್ಟಿದ್ದರು. ವರದಿಯಲ್ಲಿ ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್‍ಗೆ ಸಮಿತಿ ಶಿಫಾರಸು ಮಾಡಲಾಗಿತ್ತು. ಅಲ್ಲದೇ ಹೆಚ್ಚುವರಿ ತನಿಖೆ, ಘಟನೆಗೆ ಪೊಲೀಸರ ವೈಫಲ್ಯ, ಜೊತೆಗೆ, ಕಾರ್ಯಕ್ರಮದ ಆಯೋಜಕರು ಕಾರಣಕರ್ತರು ಅಂತ ವರದಿಯಲ್ಲಿ ಹೇಳಲಾಗಿತ್ತು. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಕೇಸ್‌ – ಆರ್‌ಸಿಬಿ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲು ಕ್ಯಾಬಿನೆಟ್‌ನಲ್ಲಿ ತೀರ್ಮಾನ

Share This Article