ಬೆಳಗಾವಿ: ಕೃಷಿ ಹೊಂಡದಲ್ಲಿ (Agricultural Pit) ಮುಳುಗಿ ತಂದೆ-ಮಗ ಸಾವನ್ನಪ್ಪಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಸವದತ್ತಿ (Savadatti) ತಾಲೂಕಿನ ಮಳಗಲಿ ಗ್ರಾಮದಲ್ಲಿ ನಡೆದಿದೆ.
ತಂದೆ ಬಸವರಾಜ್ ಕೆಂಗೇರಿ (40), ಮಗ ಧರೆಪ್ಪ ಕೆಂಗೇರಿ (14) ಮೃತ ದುರ್ದೈವಿಗಳು. ಬಸವರಾಜ್ ಕೆಂಗೇರಿ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ನಿವಾಸಿಯಾಗಿದ್ದು, ಹೆಂಡತಿ ಊರಲ್ಲಿರುವ ಜಮೀನಿಗೆ ಕೀಟನಾಶಕ ಹೊಡೆಯಲು ಹೋಗಿದ್ದ. ಈ ವೇಳೆ ಕೃಷಿ ಹೊಂಡದಲ್ಲಿ ನೀರು ತರಲು ಹೋಗಿ ಕಾಲು ಜಾರಿ ಬಿದ್ದ ಮಗ ಧರೆಪ್ಪ ಮತ್ತೋರ್ವ ಬಾಲಕ ಬಾಗಪ್ಪ ಸಣ್ಣಕ್ಕಿಯನ್ನು ರಕ್ಷಣೆ ಮಾಡಲು ಬಸವರಾಜ್ ಧಾವಿಸಿದ್ದ. ಈ ವೇಳೆ ಕೃಷಿ ಹೊಂಡದಲ್ಲಿ ಮುಳುಗಿ ಬಸವರಾಜ್ ಮತ್ತು ಧರೆಪ್ಪ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ಭಾರೀ ಮಳೆ – 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರು ಬಾಗಪ್ಪನ ರಕ್ಷಣೆ ಮಾಡಿದ್ದಾರೆ. ಸದ್ಯ ಗಂಭೀರ ಸ್ಥಿತಿಯಲ್ಲಿರುವ ಬಾಲಕ ಬಾಗಪ್ಪಗೆ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಮುರಗೋಡ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: WTC Final | 2031ರ ವರೆಗೆ ಇಂಗ್ಲೆಂಡ್‌ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ